Gold Rate Today Bangalore: ಚಿನ್ನ, ಬೆಳ್ಳಿ ದಾಖಲೆ ಬೆಲೆ; ಇಲ್ಲಿದೆ ದರಪಟ್ಟಿ

Bullion Market 2025 September 1st: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಸೋಮವಾರ ಏರಿವೆ. ಚಿನ್ನದ ಬೆಲೆ 85 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 1 ರೂ ಏರಿದೆ. ಆಭರಣ ಚಿನ್ನದ ಬೆಲೆ 9,620 ರೂ ಇದ್ದದ್ದು 9,705 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,588 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ದಾಖಲೆಯ 126 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 136 ರೂಗೆ ಹಿಗ್ಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ದಾಖಲೆ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Sep 01, 2025 | 11:01 AM

ಬೆಂಗಳೂರು, ಸೆಪ್ಟೆಂಬರ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆಯ ಓಟ ಮುಂದುವರಿದಿದೆ. ಕಳೆದ ವಾರಾಂತ್ಯದಲ್ಲಿ ಗ್ರಾಮ್​ಗೆ ಬರೋಬ್ಬರಿ 150 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (gold rate) ಇವತ್ತು ಸೋಮವಾರ 85 ರೂಗಳಷ್ಟು ದುಬಾರಿಗೊಂಡಿದೆ. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 9,700 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 10,500 ರೂ ಗಡಿ ಸಮೀಪ ದೌಡಾಯಿಸಿದೆ. ಬೆಳ್ಳಿ ಬೆಲೆಯಲ್ಲೂ ಸಖತ್ ಏರಿಕೆಯ ಓಟ ನಡೆದಿದೆ. ಕಳೆದ ಒಂದು ವಾರದಲ್ಲಿ ಗ್ರಾಮ್​ಗೆ 6 ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 97,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,05,880 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 97,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,600 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,600 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,05,880 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,05,880 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 97,050 ರೂ
  • ಚೆನ್ನೈ: 97,050 ರೂ
  • ಮುಂಬೈ: 97,050 ರೂ
  • ದೆಹಲಿ: 97,200 ರೂ
  • ಕೋಲ್ಕತಾ: 97,050 ರೂ
  • ಕೇರಳ: 97,050 ರೂ
  • ಅಹ್ಮದಾಬಾದ್: 97,100 ರೂ
  • ಜೈಪುರ್: 97,200 ರೂ
  • ಲಕ್ನೋ: 97,200 ರೂ
  • ಭುವನೇಶ್ವರ್: 97,050 ರೂ

ಇದನ್ನೂ ಓದಿ: Commercial LPG Cylinder Price: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ 51.50 ರೂ. ಇಳಿಕೆ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,520 ರಿಂಗಿಟ್ (94,400 ರುಪಾಯಿ)
  • ದುಬೈ: 3,847.50 ಡಿರಾಮ್ (92,410 ರುಪಾಯಿ)
  • ಅಮೆರಿಕ: 1,075 ಡಾಲರ್ (94,860 ರುಪಾಯಿ)
  • ಸಿಂಗಾಪುರ: 1,375 ಸಿಂಗಾಪುರ್ ಡಾಲರ್ (94,560 ರುಪಾಯಿ)
  • ಕತಾರ್: 3,865 ಕತಾರಿ ರಿಯಾಲ್ (93,560 ರೂ)
  • ಸೌದಿ ಅರೇಬಿಯಾ: 3,930 ಸೌದಿ ರಿಯಾಲ್ (92,420 ರುಪಾಯಿ)
  • ಓಮನ್: 407.50 ಒಮಾನಿ ರಿಯಾಲ್ (93,400 ರುಪಾಯಿ)
  • ಕುವೇತ್: 313.20 ಕುವೇತಿ ದಿನಾರ್ (90,500 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,600 ರೂ
  • ಚೆನ್ನೈ: 13,600 ರೂ
  • ಮುಂಬೈ: 12,600 ರೂ
  • ದೆಹಲಿ: 12,600 ರೂ
  • ಕೋಲ್ಕತಾ: 12,600 ರೂ
  • ಕೇರಳ: 13,600 ರೂ
  • ಅಹ್ಮದಾಬಾದ್: 12,600 ರೂ
  • ಜೈಪುರ್: 12,600 ರೂ
  • ಲಕ್ನೋ: 12,600 ರೂ
  • ಭುವನೇಶ್ವರ್: 13,600 ರೂ
  • ಪುಣೆ: 12,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us