Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 October 20th: ಕಳೆದ ವಾರಾಂತ್ಯದಲ್ಲಿ 300 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ನಿನ್ನೆಯಿಂದ ಸತತ ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 12,170 ರೂನಿಂದ 11,980 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,069 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 179 ರೂ ಆಗಿದೆ. ಮುಂಬೈ ಮೊದಲಾದೆಡೆ 172 ರೂಗೆ ಇಳಿದಿದೆ. ಚೆನ್ನೈ ಇತ್ಯಾದಿ ಕಡೆ 185 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Oct 20, 2025 | 1:20 PM

ಬೆಂಗಳೂರು, ಅಕ್ಟೋಬರ್ 20: ಅಸಹಜವಾಗಿ ವಿಪರೀತ ಎನಿಸುವಷ್ಟು ಏರುತ್ತಾ ಹೋಗಿದ್ದ ಬೆಳ್ಳಿ ಬೆಲೆ ನಿರೀಕ್ಷೆಯಂತೆ ಠುಸ್ ಎಂದು ಒಮ್ಮೆಗೇ ಸಾಕಷ್ಟು ಇಳಿಕೆ ಕಂಡಿದೆ. 190 ರೂವರೆಗೂ ಏರಿದ್ದ ಅದರ ಬೆಲೆ 172 ರೂಗೆ ಇಳಿದಿದೆ. ಚಿನ್ನದ ಬೆಲೆಯೂ (gold rate) ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 12,000 ರೂಗಿಂತ ಕೆಳಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,000 ರೂ ಗಡಿಗಿಂತ ಕೆಳಗಿಳಿಯಲು ಇನ್ನೊಂದು ಇಳಿಕೆ ಸಾಕಾಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,30,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,990 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 19,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 20ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,069 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,980 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,802 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 172 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,069 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,980 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 179.90 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,980 ರೂ
  • ಚೆನ್ನೈ: 11,920 ರೂ
  • ಮುಂಬೈ: 11,980 ರೂ
  • ದೆಹಲಿ: 11,995 ರೂ
  • ಕೋಲ್ಕತಾ: 11,980 ರೂ
  • ಕೇರಳ: 11,980 ರೂ
  • ಅಹ್ಮದಾಬಾದ್: 11,985 ರೂ
  • ಜೈಪುರ್: 11,995 ರೂ
  • ಲಕ್ನೋ: 11,995 ರೂ
  • ಭುವನೇಶ್ವರ್: 11,980 ರೂ

ಇದನ್ನೂ ಓದಿ: ಶಕ್ತಿಶಾಲಿ ಏರ್ ಫೋರ್ಸ್; ಚೀನಾವನ್ನು ಹಿಂದಿಕ್ಕಿದ ಭಾರತ ವಿಶ್ವದ ನಂ. 3

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 565 ರಿಂಗಿಟ್ (11,738 ರುಪಾಯಿ)
  • ದುಬೈ: 474.25 ಡಿರಾಮ್ (11,336 ರುಪಾಯಿ)
  • ಅಮೆರಿಕ: 132.50 ಡಾಲರ್ (11,633 ರುಪಾಯಿ)
  • ಸಿಂಗಾಪುರ: 171.60 ಸಿಂಗಾಪುರ್ ಡಾಲರ್ (11,640 ರುಪಾಯಿ)
  • ಕತಾರ್: 473 ಕತಾರಿ ರಿಯಾಲ್ (11,392 ರೂ)
  • ಸೌದಿ ಅರೇಬಿಯಾ: 482 ಸೌದಿ ರಿಯಾಲ್ (11,283 ರುಪಾಯಿ)
  • ಓಮನ್: 49.95 ಒಮಾನಿ ರಿಯಾಲ್ (11,291 ರುಪಾಯಿ)
  • ಕುವೇತ್: 38.96 ಕುವೇತಿ ದಿನಾರ್ (11,178 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 179.90 ರೂ
  • ಚೆನ್ನೈ: 190 ರೂ
  • ಮುಂಬೈ: 172 ರೂ
  • ದೆಹಲಿ: 172 ರೂ
  • ಕೋಲ್ಕತಾ: 172 ರೂ
  • ಕೇರಳ: 190 ರೂ
  • ಅಹ್ಮದಾಬಾದ್: 172 ರೂ
  • ಜೈಪುರ್: 172 ರೂ
  • ಲಕ್ನೋ: 172 ರೂ
  • ಭುವನೇಶ್ವರ್: 190 ರೂ
  • ಪುಣೆ: 172

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us