AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಬೆಳ್ಳಿ ಬೆಲೆ ಭರ್ಜರಿ ಕುಸಿತ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2026 April 21st: ನಿನ್ನೆ 45 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲಿ 10 ರೂ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,235 ರೂ ಇದೆ. 24 ಕ್ಯಾರಟ್ ಚಿನ್ನದ ಬೆಲೆ 15,529 ರೂನಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 265 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 275 ರೂ ಇದೆ.

Gold Rates: ಬೆಳ್ಳಿ ಬೆಲೆ ಭರ್ಜರಿ ಕುಸಿತ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 21, 2026 | 3:58 PM

Share

ಬೆಂಗಳೂರು, ಏಪ್ರಿಲ್ 21: ನಿನ್ನೆ ಚಿನ್ನದ ಬೆಲೆ ಇಳಿದಿತ್ತು. ಇವತ್ತು ಬೆಳ್ಳಿಯ ಸರದಿ. ಇಂದು ಮಂಗಳವಾರ ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಕಡಿಮೆಗೊಂಡಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಇದರ ಬೆಲೆ 275 ರೂನಿಂದ 265 ರೂಗೆ ಇಳಿದಿದೆ. ಕೆಲವೆಡೆ ಬೆಲೆ 280 ರೂನಿಂದ 5 ರೂ ಕಡಿಮೆಗೊಂಡು 275 ರೂ ಆಗಿದೆ. ಆದರೆ, ಚಿನ್ನದ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,529 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,235 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,647 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,529 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,235 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,235 ರೂ
  • ಚೆನ್ನೈ: 14,300 ರೂ
  • ಮುಂಬೈ: 14,235 ರೂ
  • ದೆಹಲಿ: 14,250 ರೂ
  • ಕೋಲ್ಕತಾ: 14,235 ರೂ
  • ಕೇರಳ: 14,235 ರೂ
  • ಅಹ್ಮದಾಬಾದ್: 14,240 ರೂ
  • ಜೈಪುರ್: 14,250 ರೂ
  • ಲಕ್ನೋ: 14,250 ರೂ
  • ಭುವನೇಶ್ವರ್: 14,235 ರೂ

ಇದನ್ನೂ ಓದಿ: ಮಾರ್ಚ್​ನಲ್ಲಿ ಪ್ರಮುಖ ವಲಯಗಳ ಉತ್ಪಾದನೆಯಲ್ಲಿ ಕುಸಿತ; ಆರ್ಥಿಕ ವರ್ಷದ ಒಟ್ಟಾರೆ ಬೆಳವಣಿಗೆ ಶೇ. 2.6ಕ್ಕೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,844 ರುಪಾಯಿ)
  • ದುಬೈ: 537.50 ಡಿರಾಮ್ (13,693 ರುಪಾಯಿ)
  • ಅಮೆರಿಕ: 149.50 ಡಾಲರ್ (13,987 ರುಪಾಯಿ)
  • ಸಿಂಗಾಪುರ: 190.60 ಸಿಂಗಾಪುರ್ ಡಾಲರ್ (14,015 ರುಪಾಯಿ)
  • ಕತಾರ್: 532 ಕತಾರಿ ರಿಯಾಲ್ (13,655 ರೂ)
  • ಸೌದಿ ಅರೇಬಿಯಾ: 544 ಸೌದಿ ರಿಯಾಲ್ (13,572 ರುಪಾಯಿ)
  • ಓಮನ್: 57.05 ಒಮಾನಿ ರಿಯಾಲ್ (13,866 ರುಪಾಯಿ)
  • ಕುವೇತ್: 44.43 ಕುವೇತಿ ದಿನಾರ್ (13,571 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 265 ರೂ
  • ಚೆನ್ನೈ: 275 ರೂ
  • ಮುಂಬೈ: 265 ರೂ
  • ದೆಹಲಿ: 265 ರೂ
  • ಕೋಲ್ಕತಾ: 265 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 265 ರೂ
  • ಜೈಪುರ್: 265 ರೂ
  • ಲಕ್ನೋ: 265 ರೂ
  • ಭುವನೇಶ್ವರ್: 275 ರೂ
  • ಪುಣೆ: 265

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More