Gold Rate Today Bangalore: ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬೆಳ್ಳಿಯೂ ಬೆಂಕಿ

Bullion Market 2026 January 21st: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಭರ್ಜರಿ ಹೆಚ್ಚಳ ಪಡೆದಿವೆ. ಚಿನ್ನದ ಬೆಲೆ ಗ್ರಾಮ್​ಗೆ 690 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 13,500 ರೂನಿಂದ 14,190 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,480 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 315 ರೂನಿಂದ 325 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 340 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬೆಳ್ಳಿಯೂ ಬೆಂಕಿ
ಚಿನ್ನ

Updated on: Jan 21, 2026 | 11:36 AM

ಬೆಂಗಳೂರು, ಜನವರಿ 21: ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿದೆ. ಒಂದೇ ದಿನ ಚಿನ್ನದ ಬೆಲೆ (Gold Rate) ಬರೋಬ್ಬರಿ 690 ರೂ ಹೆಚ್ಚಿದೆ. 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬಹುತೇಕ 7,000 ರುಗಳಷ್ಟು ಬೆಲೆ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 15,000 ರೂ ಗಡಿ ದಾಟಿದೆ. ಕಳೆದ ಮೂರು ದಿನದಲ್ಲಿ ಗ್ರಾಮ್​ಗೆ 1,000 ರೂನಷ್ಟು ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆಯೂ ಚಿನ್ನದ ಬೆಲೆ ಏರಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯ ಹೈಜಂಪ್ ಮುಂದುವರಿದಿದೆ. ಬುಧವಾರ ಇದರ ಬೆಲೆ 10 ರೂ ಹೆಚ್ಚಿದೆ. ಮೂರು ದಿನಗಳಲ್ಲಿ ಬರೋಬ್ಬರಿ 30 ರೂ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 32,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 32,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 34,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,480 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,190 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,611 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 325 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,480 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,190 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 325 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,190 ರೂ
  • ಚೆನ್ನೈ: 14,250 ರೂ
  • ಮುಂಬೈ: 14,190 ರೂ
  • ದೆಹಲಿ: 14,205 ರೂ
  • ಕೋಲ್ಕತಾ: 14,190 ರೂ
  • ಕೇರಳ: 14,190 ರೂ
  • ಅಹ್ಮದಾಬಾದ್: 14,195 ರೂ
  • ಜೈಪುರ್: 14,205 ರೂ
  • ಲಕ್ನೋ: 14,205 ರೂ
  • ಭುವನೇಶ್ವರ್: 14,190 ರೂ

ಇದನ್ನೂ ಓದಿ: ಫ್ಲೆಕ್ಸಿಕ್ಯಾಪ್, ಮಲ್ಟಿಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳ ನಡುವೆ ಏನು ವ್ಯತ್ಯಾಸ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 610 ರಿಂಗಿಟ್ (13,740 ರುಪಾಯಿ)
  • ದುಬೈ: 529 ಡಿರಾಮ್ (13,156 ರುಪಾಯಿ)
  • ಅಮೆರಿಕ: 147.50 ಡಾಲರ್ (13,476 ರುಪಾಯಿ)
  • ಸಿಂಗಾಪುರ: 192.80 ಸಿಂಗಾಪುರ್ ಡಾಲರ್ (13,719 ರುಪಾಯಿ)
  • ಕತಾರ್: 525 ಕತಾರಿ ರಿಯಾಲ್ (13,160 ರೂ)
  • ಸೌದಿ ಅರೇಬಿಯಾ: 536 ಸೌದಿ ರಿಯಾಲ್ (13,059 ರುಪಾಯಿ)
  • ಓಮನ್: 56 ಒಮಾನಿ ರಿಯಾಲ್ (13,290 ರುಪಾಯಿ)
  • ಕುವೇತ್: 43.28 ಕುವೇತಿ ದಿನಾರ್ (12,935 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 325 ರೂ
  • ಚೆನ್ನೈ: 340 ರೂ
  • ಮುಂಬೈ: 325 ರೂ
  • ದೆಹಲಿ: 325 ರೂ
  • ಕೋಲ್ಕತಾ: 325 ರೂ
  • ಕೇರಳ: 340 ರೂ
  • ಅಹ್ಮದಾಬಾದ್: 325 ರೂ
  • ಜೈಪುರ್: 325 ರೂ
  • ಲಕ್ನೋ: 325 ರೂ
  • ಭುವನೇಶ್ವರ್: 340 ರೂ
  • ಪುಣೆ: 325

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us