Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ; ಇವತ್ತಿನ ದರಪಟ್ಟಿ

Bullion Market 2025 May 21st: ಕಳೆದೆರಡು ವಾರದಿಂದ ಏರಿಳಿಕೆಯ ಆಟವಾಡುತ್ತಿರುವ ಚಿನ್ನದ ಬೆಲೆ ಇವತ್ತು ಭರ್ಜರಿ ಹೆಚ್ಚಳ ಕಂಡಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,710 ರೂ ಇದ್ದದ್ದು 8,930 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,742 ರೂಗೆ ಏರಿದೆ. ಬೆಳ್ಳಿ ಬೆಲೆ ಗ್ರಾಮ್​​​ಗೆ 3 ರೂನಷ್ಟು ಏರಿದೆ. ಬೆಂಗಳೂರಿನಲ್ಲಿ ಬೆಲೆ 100 ರೂ ಮುಟ್ಟಿದರೆ, ಚೆನ್ನೈ ಮೊದಲಾದ ಕಡೆ 111 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ; ಇವತ್ತಿನ ದರಪಟ್ಟಿ
ಚಿನ್ನ

Updated on: May 21, 2025 | 10:31 AM

ಬೆಂಗಳೂರು, ಮೇ 21: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (Gold and silver rates today) ಇಂದು ಭಾರೀ ಮೊತ್ತದಷ್ಟು ಏರಿಕೆ ಕಂಡಿವೆ. ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ ಬರೋಬ್ಬರಿ 220 ರೂ ಏರಿದೆ. ಬೆಳ್ಳಿ ಬೆಲೆಯಂತೂ ಗ್ರಾಮ್​​ಗೆ 3 ರೂ ಹೆಚ್ಚು ದುಬಾರಿಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 97 ರೂ ಇದ್ದದ್ದು 100 ರೂಗೆ ಏರಿದೆ. ಇದು ಚಿನ್ನದ ಸಾರ್ವಕಾಲಿಕ ದಾಖಲೆ ಮಟ್ಟದ ಬೆಲೆಯಾಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆ ಭರ್ಜರಿ ಏರಿಕೆ ಕಂಡಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟದತ್ತ ಸಾಗುತ್ತಿದೆ ಚಿನ್ನದ ಬೆಲೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,420 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,070 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,300 ರೂ
  • ಚೆನ್ನೈ: 89,300 ರೂ
  • ಮುಂಬೈ: 89,300 ರೂ
  • ದೆಹಲಿ: 89,450 ರೂ
  • ಕೋಲ್ಕತಾ: 89,300 ರೂ
  • ಕೇರಳ: 89,300 ರೂ
  • ಅಹ್ಮದಾಬಾದ್: 89,350 ರೂ
  • ಜೈಪುರ್: 89,450 ರೂ
  • ಲಕ್ನೋ: 89,450 ರೂ
  • ಭುವನೇಶ್ವರ್: 89,300 ರೂ

ಇದನ್ನೂ ಓದಿ:

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,450 ರಿಂಗಿಟ್ (89,200 ರುಪಾಯಿ)
  • ದುಬೈ: 3,637.50 ಡಿರಾಮ್ (84,770 ರುಪಾಯಿ)
  • ಅಮೆರಿಕ: 995 ಡಾಲರ್ (85,170 ರುಪಾಯಿ)
  • ಸಿಂಗಾಪುರ: 1,341 ಸಿಂಗಾಪುರ್ ಡಾಲರ್ (88,870 ರುಪಾಯಿ)
  • ಕತಾರ್: 3,690 ಕತಾರಿ ರಿಯಾಲ್ (86,670 ರೂ)
  • ಸೌದಿ ಅರೇಬಿಯಾ: 3,750 ಸೌದಿ ರಿಯಾಲ್ (85,580 ರುಪಾಯಿ)
  • ಓಮನ್: 388.50 ಒಮಾನಿ ರಿಯಾಲ್ (86,390 ರುಪಾಯಿ)
  • ಕುವೇತ್: 300.70 ಕುವೇತಿ ದಿನಾರ್ (83,890 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,100 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us