AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಇಳಿಕೆ; ಚಿನ್ನದ ಬೆಲೆ ಏರಿಕೆ

Bullion Market 2025 October 21st: ಇಂದು ಮಂಗಳವಾರ ಚಿನ್ನದ ಬೆಲೆ ಏರಿಕೆ ಆದರೆ, ಬೆಳ್ಳಿ ಬೆಲೆ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 11,980 ರೂನಿಂದ 12,170 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,227 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 178 ರೂಗೆ ತಗ್ಗಿದೆ. ಚೆನ್ನೈ ಮೊದಲಾದ ಕಡೆ ಬೆಲೆ 188 ರೂ ಆಗಿದೆ. ಮುಂಬೈ ಇತ್ಯಾದಿ ಕಡೆ 170 ರೂಗೆ ಇಳಿದಿದೆ.

Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಇಳಿಕೆ; ಚಿನ್ನದ ಬೆಲೆ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 21, 2025 | 2:01 PM

Share

ಬೆಂಗಳೂರು, ಅಕ್ಟೋಬರ್ 21: ಚಿನ್ನದ ಬೆಲೆ ಏರಿಕೆಯ ಹಾದಿಗೆ ಬಂದರೆ, ಬೆಳ್ಳಿ ಬೆಲೆಯ ಇಳಿಕೆ ಮುಂದುವರಿದಿದೆ. ಇಂದು ಮಂಗಳವಾರ ಚಿನ್ನದ ಬೆಲೆ (gold rate) ಗ್ರಾಮ್​ಗೆ 190-200 ರೂಗಳಷ್ಟು ಕಡಿಮೆ ಆಗಿದೆ. ನಿನ್ನೆ 12,170 ರೂನಿಂದ 11,980 ರೂಗೆ ಇಳಿದಿದ್ದ ಆಭರಣ ಚಿನ್ನದ ಬೆಲೆ ಮತ್ತೆ 12,170 ರೂಗೆ ಮರಳಿದೆ. ಬೆಳ್ಳಿ ಬೆಲೆ ಎರಡು ರೂ ತಗ್ಗಿದೆ. ಮುಂಬೈ ಮೊದಲಾದ ಕಡೆ ಬೆಲೆ 170 ರೂಗೆ ಇಳಿದರೆ, ಚೆನ್ನೈ ಇತ್ಯಾದಿ ಕಡೆ 188 ರೂ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆಯ ಏರಿಳಿತಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,21,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,32,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,21,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,800 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,227 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,170 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,958 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,227 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,170 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 178 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,170 ರೂ
  • ಚೆನ್ನೈ: 12,180 ರೂ
  • ಮುಂಬೈ: 12,170 ರೂ
  • ದೆಹಲಿ: 12,185 ರೂ
  • ಕೋಲ್ಕತಾ: 12,170 ರೂ
  • ಕೇರಳ: 12,170 ರೂ
  • ಅಹ್ಮದಾಬಾದ್: 12,175 ರೂ
  • ಜೈಪುರ್: 12,185 ರೂ
  • ಲಕ್ನೋ: 12,185 ರೂ
  • ಭುವನೇಶ್ವರ್: 12,170 ರೂ

ಇದನ್ನೂ ಓದಿ: ಬಬಲ್ ಝೋನ್​ನಲ್ಲಿ ಚಿನ್ನ; 400 ಡಾಲರ್​ನಷ್ಟು ಬೆಲೆ ಇಳಿಕೆ ಸಾಧ್ಯತೆ: ಆಭರಣ ವ್ಯಾಪಾರಸ್ಥರ ಅನಿಸಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 572 ರಿಂಗಿಟ್ (11,917 ರುಪಾಯಿ)
  • ದುಬೈ: 483 ಡಿರಾಮ್ (11,579 ರುಪಾಯಿ)
  • ಅಮೆರಿಕ: 135.50 ಡಾಲರ್ (11,931 ರುಪಾಯಿ)
  • ಸಿಂಗಾಪುರ: 171.60 ಸಿಂಗಾಪುರ್ ಡಾಲರ್ (11,665 ರುಪಾಯಿ)
  • ಕತಾರ್: 481.50 ಕತಾರಿ ರಿಯಾಲ್ (11,644 ರೂ)
  • ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,528 ರುಪಾಯಿ)
  • ಓಮನ್: 50.90 ಒಮಾನಿ ರಿಯಾಲ್ (11,641 ರುಪಾಯಿ)
  • ಕುವೇತ್: 39.83 ಕುವೇತಿ ದಿನಾರ್ (11,459 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 178 ರೂ
  • ಚೆನ್ನೈ: 188 ರೂ
  • ಮುಂಬೈ: 170 ರೂ
  • ದೆಹಲಿ: 170 ರೂ
  • ಕೋಲ್ಕತಾ: 170 ರೂ
  • ಕೇರಳ: 188 ರೂ
  • ಅಹ್ಮದಾಬಾದ್: 170 ರೂ
  • ಜೈಪುರ್: 170 ರೂ
  • ಲಕ್ನೋ: 170 ರೂ
  • ಭುವನೇಶ್ವರ್: 188 ರೂ
  • ಪುಣೆ: 170

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ