
ಬೆಂಗಳೂರು, ಆಗಸ್ಟ್ 22: ಎರಡು ವಾರದಲ್ಲಿ ಮೊದಲ ಬಾರಿಗೆ ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆ (gold rates) ಇವತ್ತು ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಆದರೆ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದ್ದು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಮೀಪದಲ್ಲಿದೆ. ಚಿನ್ನದ ಬೆಲೆ ಇವತ್ತು ಶುಕ್ರವಾರ ಗ್ರಾಮ್ಗೆ 15 ರೂ ಮಾತ್ರವೇ ಇಳಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಸಿಂಗಾಪುದಲ್ಲಿ ತುಸು ಹೆಚ್ಚಿದೆ. ಇನ್ನು ಬೆಳ್ಳಿ ಬೆಲೆ ಇವತ್ತು ಗ್ರಾಮ್ಗೆ 2 ರೂ ಏರಿ 118 ರೂ ಮುಟ್ಟಿದೆ. ಜುಲೈ 23ರಂದು 119 ರೂನ ಗರಿಷ್ಠ ಮಟ್ಟಕ್ಕೆ ಬೆಳ್ಳಿ ಬೆಲೆ ಹೆಚ್ಚಿತ್ತು. ಈಗ ಅದರ ಸಮೀಪಕ್ಕೆ ಬೆಲೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,00,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 12,800 ರೂ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಆನ್ಲೈನ್ ಗೇಮಿಂಗ್ ಬಿಲ್ 2025; ಡ್ರೀಮ್11ನಂತಹ ಆ್ಯಪ್ಗಳ ಕತೆ ಏನು? ಇಲ್ಲಿದೆ ಈ ಮಸೂದೆಯ ಮುಖ್ಯಾಂಶಗಳು
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ