Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 1,000 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 December 22nd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸೋಮವಾರ ಹೆಚ್ಚಳ ಆಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 100 ರೂ ಏರಿದರೆ, ಬೆಳ್ಳಿ ಬೆಲೆ 5 ರೂ ಜಿಗಿದಿದೆ. ಆಭರಣ ಚಿನ್ನದ ಬೆಲೆ 12,300 ರೂನಿಂದ 12,400 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,528 ರೂ ಮುಟ್ಟಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 214 ರೂನಿಂದ 219 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 231 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 1,000 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Dec 22, 2025 | 11:37 AM

ಬೆಂಗಳೂರು, ಡಿಸೆಂಬರ್ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆಯ ನಾಗಾಲೋಟ ಮುಂದುವರಿದಿದೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 100 ರೂ ಹೆಚ್ಚಿದೆ. ಆದರೆ, ಬೆಳ್ಳಿ ಬೆಲೆ ಜಿಗಿಜಿಗಿದು ಮೇಲೇರುತ್ತಲೇ ಇದೆ. ಇಂದು ಸೋಮವಾರ ಇದರ ಬೆಲೆ ಗ್ರಾಮ್​ಗೆ ಬರೋಬ್ಬರಿ 5 ರೂ ಹೆಚ್ಚಿ ಹೊಸ ದಾಖಲೆಯ ಮಟ್ಟವನ್ನೇ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 21,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,24,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 21,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,528 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,400 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,146 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 219 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,528 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,400 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 219 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,400 ರೂ
  • ಚೆನ್ನೈ: 12,480 ರೂ
  • ಮುಂಬೈ: 12,400 ರೂ
  • ದೆಹಲಿ: 12,415 ರೂ
  • ಕೋಲ್ಕತಾ: 12,400 ರೂ
  • ಕೇರಳ: 12,400 ರೂ
  • ಅಹ್ಮದಾಬಾದ್: 12,405 ರೂ
  • ಜೈಪುರ್: 12,415 ರೂ
  • ಲಕ್ನೋ: 12,415 ರೂ
  • ಭುವನೇಶ್ವರ್: 12,400 ರೂ

ಇದನ್ನೂ ಓದಿ: ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಕ್ಷಿಪ್ರವೇಗದಲ್ಲಿ 30,000 ಉದ್ಯೋಗಿಗಳ ನೇಮಕ; ಭಾರತದಲ್ಲಿ ಸಿಕ್ಕಾಪಟ್ಟೆ ಆಗುತ್ತಿದೆ ಐಟಿ ಹೈರಿಂಗ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 557 ರಿಂಗಿಟ್ (12,241 ರುಪಾಯಿ)
  • ದುಬೈ: 484 ಡಿರಾಮ್ (11,813 ರುಪಾಯಿ)
  • ಅಮೆರಿಕ: 135 ಡಾಲರ್ (12,101 ರುಪಾಯಿ)
  • ಸಿಂಗಾಪುರ: 176.60 ಸಿಂಗಾಪುರ್ ಡಾಲರ್ (12,252 ರುಪಾಯಿ)
  • ಕತಾರ್: 482.50 ಕತಾರಿ ರಿಯಾಲ್ (11,866 ರೂ)
  • ಸೌದಿ ಅರೇಬಿಯಾ: 492 ಸೌದಿ ರಿಯಾಲ್ (11,759 ರುಪಾಯಿ)
  • ಓಮನ್: 51.35 ಒಮಾನಿ ರಿಯಾಲ್ (11,957 ರುಪಾಯಿ)
  • ಕುವೇತ್: 39.46 ಕುವೇತಿ ದಿನಾರ್ (11,519 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 219 ರೂ
  • ಚೆನ್ನೈ: 231 ರೂ
  • ಮುಂಬೈ: 219 ರೂ
  • ದೆಹಲಿ: 219 ರೂ
  • ಕೋಲ್ಕತಾ: 219 ರೂ
  • ಕೇರಳ: 231 ರೂ
  • ಅಹ್ಮದಾಬಾದ್: 219 ರೂ
  • ಜೈಪುರ್: 219 ರೂ
  • ಲಕ್ನೋ: 219 ರೂ
  • ಭುವನೇಶ್ವರ್: 231 ರೂ
  • ಪುಣೆ: 219

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us