AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2026 February 22nd: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಏರಿದರೆ, ಬೆಳ್ಳಿ ಬೆಲೆ 5ರಿಂದ 20 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 14,315 ರೂನಿಂದ 14,600 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,928 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 275 ರೂ ಆಗಿದೆ. ಚೆನ್ನೈ ಮೊದಲಾದೆಡೆಯೂ ಬೆಲೆ 290 ರೂನಲ್ಲಿ ಇದೆ.

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 22, 2026 | 12:18 PM

Share

ಬೆಂಗಳೂರು, ಫೆಬ್ರುವರಿ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯ ಹಾದಿಗೆ ಬಂದಂತಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​ಗೆ 285 ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಬಹುತೇಕ ಕಡೆ ಇದರ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಗ್ರಾಮ್​ಗೆ 5 ರೂನಿಂದ 20 ರೂವರೆಗೆ ಹೆಚ್ಚಳ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 5 ರೂ ಏರಿ 275 ರೂ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಲೆ 20 ರೂ ಹೆಚ್ಚಳಗೊಂಡು 290 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,928 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,600 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,946 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,928 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,600 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,600 ರೂ
  • ಚೆನ್ನೈ: 14,680 ರೂ
  • ಮುಂಬೈ: 14,600 ರೂ
  • ದೆಹಲಿ: 14,615 ರೂ
  • ಕೋಲ್ಕತಾ: 14,600 ರೂ
  • ಕೇರಳ: 14,600 ರೂ
  • ಅಹ್ಮದಾಬಾದ್: 14,605 ರೂ
  • ಜೈಪುರ್: 14,615 ರೂ
  • ಲಕ್ನೋ: 14,615 ರೂ
  • ಭುವನೇಶ್ವರ್: 14,600 ರೂ

ಇದನ್ನೂ ಓದಿ: ಶ್ರೀಮಂತ ದೇಶಗಳಿಗೆ ಎಐ ಕುತ್ತು; ಶೇ. 60 ಉದ್ಯೋಗನಷ್ಟ ಸಾಧ್ಯತೆ: ಐಎಂಎಫ್ ಎಚ್ಚರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 619 ರಿಂಗಿಟ್ (14,387 ರುಪಾಯಿ)
  • ದುಬೈ: 563 ಡಿರಾಮ್ (13,908 ರುಪಾಯಿ)
  • ಅಮೆರಿಕ: 157 ಡಾಲರ್ (14,244 ರುಪಾಯಿ)
  • ಸಿಂಗಾಪುರ: 199.30 ಸಿಂಗಾಪುರ್ ಡಾಲರ್ (14,235 ರುಪಾಯಿ)
  • ಕತಾರ್: 559 ಕತಾರಿ ರಿಯಾಲ್ (13,904 ರೂ)
  • ಸೌದಿ ಅರೇಬಿಯಾ: 573 ಸೌದಿ ರಿಯಾಲ್ (13,859 ರುಪಾಯಿ)
  • ಓಮನ್: 59.95 ಒಮಾನಿ ರಿಯಾಲ್ (14,127 ರುಪಾಯಿ)
  • ಕುವೇತ್: 46.18 ಕುವೇತಿ ದಿನಾರ್ (13,717 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 277 ರೂ
  • ಚೆನ್ನೈ: 290 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 290 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 290 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ