Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 March 22nd: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಕಳೆದ ಮೂರು ವಾರಗಳಿಂದ ಸಿಕ್ಕಾಪಟ್ಟೆ ಬೆಲೆ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,380 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 14,597 ರೂಗೆ ಬಂದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Mar 22, 2026 | 10:41 AM

ಬೆಂಗಳೂರು, ಮಾರ್ಚ್ 22: ಚಿನ್ನದ ಬೆಲೆ (Gold Rates) ಭರ್ಜರಿಯಾಗಿ ಇಳಿಯುವ ಟ್ರೆಂಡ್ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್​ಗೆ 300 ರೂ ಹತ್ತಿರದಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಮಾರ್ಚ್ ತಿಂಗಳಿಂದ ಈಚೆ ಮೂರು ವಾರದಲ್ಲಿ ಎರಡು ಸಾವಿರ ರೂಗೂ ಹೆಚ್ಚಿನ ಮೊತ್ತದಷ್ಟು ಇಳಿಕೆ ಆಗಿದೆ. ಮಾರ್ಚ್ ಆರಂಭದಲ್ಲಿ ಅಪರಂಜಿ ಚಿನ್ನಕ್ಕೆ ಇದ್ದುದಕ್ಕಿಂತ ಕಡಿಮೆ ಬೆಲೆಗೆ ಆಭರಣ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಇದರ ಬೆಲೆಯಲ್ಲಿ 15 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,597 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,380 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,948 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,597 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,380 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,380 ರೂ
  • ಚೆನ್ನೈ: 13,620 ರೂ
  • ಮುಂಬೈ: 13,380 ರೂ
  • ದೆಹಲಿ: 13,395 ರೂ
  • ಕೋಲ್ಕತಾ: 13,380 ರೂ
  • ಕೇರಳ: 13,380 ರೂ
  • ಅಹ್ಮದಾಬಾದ್: 13,385 ರೂ
  • ಜೈಪುರ್: 13,395 ರೂ
  • ಲಕ್ನೋ: 13,395 ರೂ
  • ಭುವನೇಶ್ವರ್: 13,380 ರೂ

ಇದನ್ನೂ ಓದಿ: ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 550 ರಿಂಗಿಟ್ (13,095 ರುಪಾಯಿ)
  • ದುಬೈ: 501.50 ಡಿರಾಮ್ (12,803 ರುಪಾಯಿ)
  • ಅಮೆರಿಕ: 143 ಡಾಲರ್ (13,409 ರುಪಾಯಿ)
  • ಸಿಂಗಾಪುರ: 187 ಸಿಂಗಾಪುರ್ ಡಾಲರ್ (13,674 ರುಪಾಯಿ)
  • ಕತಾರ್: 506 ಕತಾರಿ ರಿಯಾಲ್ (13,014 ರೂ)
  • ಸೌದಿ ಅರೇಬಿಯಾ: 527 ಸೌದಿ ರಿಯಾಲ್ (13,161 ರುಪಾಯಿ)
  • ಓಮನ್: 53.15 ಒಮಾನಿ ರಿಯಾಲ್ (12,995 ರುಪಾಯಿ)
  • ಕುವೇತ್: 41.86 ಕುವೇತಿ ದಿನಾರ್ (12,803 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us