AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ

Bullion Market 2025 October 22nd: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ತಗ್ಗಿವೆ. ಬೆಳ್ಳಿ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ 12,170 ರೂನಿಂದ 11,660 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,720 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 163.90 ರೂಗೆ ತಗ್ಗಿದೆ. ಚೆನ್ನೈ ಮೊದಲಾದ ಕಡೆ ಬೆಲೆ 180 ರೂ ಆಗಿದೆ. ಮುಂಬೈ ಇತ್ಯಾದಿ ಕಡೆ 162 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 22, 2025 | 2:35 PM

Share

ಬೆಂಗಳೂರು, ಅಕ್ಟೋಬರ್ 22: ಚಿನ್ನದ ಬೆಲೆಯ (gold rate) ಏರಿಳಿಕೆ ಆಟ ನಡೆಯುತ್ತಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 500ಕ್ಕೂ ಹೆಚ್ಚು ರೂಗಳಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಂತೂ ಭರ್ಜರಿ ಇಳಿಕೆ ಮುಂದುವರಿಸಿದೆ. ಇಂದು ಅದರ ಬೆಲೆ ಗ್ರಾಮ್​ಗೆ ಬರೋಬ್ಬರಿ 8 ರೂಗಳಷ್ಟು ಕಡಿಮೆ ಆಗಿದೆ. 162 ರೂಗೆ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,16,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,27,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,16,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,390 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,720 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,660 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,540 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 162 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,720 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,660 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 163.90 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,660 ರೂ
  • ಚೆನ್ನೈ: 11,700 ರೂ
  • ಮುಂಬೈ: 11,660 ರೂ
  • ದೆಹಲಿ: 11,675 ರೂ
  • ಕೋಲ್ಕತಾ: 11,660 ರೂ
  • ಕೇರಳ: 11,660 ರೂ
  • ಅಹ್ಮದಾಬಾದ್: 11,665 ರೂ
  • ಜೈಪುರ್: 11,675 ರೂ
  • ಲಕ್ನೋ: 11,675 ರೂ
  • ಭುವನೇಶ್ವರ್: 11,660 ರೂ

ಇದನ್ನೂ ಓದಿ: ದಾಖಲೆಗಳಿಲ್ಲದ ಒಡವೆ ಸೀಜ್; ಅಧಿಕಾರಿ ಮಾಡಿದ ತಪ್ಪು ಮತ್ತು ಹೆಂಡತಿ ದೆಸೆಯಿಂದ ಕೇಸ್ ಗೆದ್ದ ಬೆಂಗಳೂರಿಗ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 550 ರಿಂಗಿಟ್ (11,409 ರುಪಾಯಿ)
  • ದುಬೈ: 458.75 ಡಿರಾಮ್ (10,956 ರುಪಾಯಿ)
  • ಅಮೆರಿಕ: 128.50 ಡಾಲರ್ (11,270 ರುಪಾಯಿ)
  • ಸಿಂಗಾಪುರ: 165.90 ಸಿಂಗಾಪುರ್ ಡಾಲರ್ (11,212 ರುಪಾಯಿ)
  • ಕತಾರ್: 459 ಕತಾರಿ ರಿಯಾಲ್ (11,054 ರೂ)
  • ಸೌದಿ ಅರೇಬಿಯಾ: 467 ಸೌದಿ ರಿಯಾಲ್ (10,921 ರುಪಾಯಿ)
  • ಓಮನ್: 48.65 ಒಮಾನಿ ರಿಯಾಲ್ (11,083 ರುಪಾಯಿ)
  • ಕುವೇತ್: 37.73 ಕುವೇತಿ ದಿನಾರ್ (10,797 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 163.90 ರೂ
  • ಚೆನ್ನೈ: 180 ರೂ
  • ಮುಂಬೈ: 162 ರೂ
  • ದೆಹಲಿ: 162 ರೂ
  • ಕೋಲ್ಕತಾ: 162 ರೂ
  • ಕೇರಳ: 180 ರೂ
  • ಅಹ್ಮದಾಬಾದ್: 162 ರೂ
  • ಜೈಪುರ್: 162 ರೂ
  • ಲಕ್ನೋ: 162 ರೂ
  • ಭುವನೇಶ್ವರ್: 180 ರೂ
  • ಪುಣೆ: 162

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ