AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ದಾಖಲೆ ಓಟ

Bullion Market 2025 September 22nd: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಸೋಮವಾರ ಏರಿಕೆ ಆಗಿವೆ. ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಆಭರಣ ಚಿನ್ನದ ಬೆಲೆ 10,280 ರೂ ಇದ್ದದ್ದು 10,320 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 11,258 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 133 ರೂನಿಂದ 138 ರೂಗೆ ಹೆಚ್ಚಿದೆ. ಚೆನ್ನೈ ಮೊದಲಾದೆಡೆ ಬೆಲೆ 148 ರೂಗೆ ಏರಿ ದಾಖಲೆ ಬರೆದಿದೆ.

Gold Rate Today Bangalore: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ದಾಖಲೆ ಓಟ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 22, 2025 | 10:52 AM

Share

ಬೆಂಗಳೂರು, ಸೆಪ್ಟೆಂಬರ್ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಈ ವಾರವೂ ಮುಂದುವರಿಯುತ್ತಿದೆ. ಇಂದು ಸೋಮವಾರ ಚಿನ್ನದ ಬೆಲೆ 40 ರೂ ಏರಿದರೆ, ಬೆಳ್ಳಿ ಬೆಲೆ (Silver rates) ಹೊಸ ದಾಖಲೆ ಬರೆಯುವುದನ್ನು ಮುಂದುವರಿಸಿದೆ. ಇಂದು ಬೆಳ್ಳಿ ಬೆಲೆ ಒಂದೇ ದಿನ ಗ್ರಾಮ್​ಗೆ 3 ರೂ ಜಂಪ್ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,03,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,12,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,03,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,800 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,03,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,12,580 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 84,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,350 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,03,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,12,580 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,350 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,03,200 ರೂ
  • ಚೆನ್ನೈ: 1,03,200 ರೂ
  • ಮುಂಬೈ: 1,03,200 ರೂ
  • ದೆಹಲಿ: 1,03,350 ರೂ
  • ಕೋಲ್ಕತಾ: 1,03,200 ರೂ
  • ಕೇರಳ: 1,03,200 ರೂ
  • ಅಹ್ಮದಾಬಾದ್: 1,03,250 ರೂ
  • ಜೈಪುರ್: 1,03,350 ರೂ
  • ಲಕ್ನೋ: 1,03,350 ರೂ
  • ಭುವನೇಶ್ವರ್: 1,03,200 ರೂ

ಇದನ್ನೂ ಓದಿ: ಜಿಎಸ್​ಟಿ 2.0; ಬೆಲೆ ತಗ್ಗಲಿರುವ ಮತ್ತು ದುಬಾರಿಯಾಗಲಿರುವ ವಸ್ತುಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,800 ರಿಂಗಿಟ್ (1,00,550 ರುಪಾಯಿ)
  • ದುಬೈ: 4,112.50 ಡಿರಾಮ್ (98,750 ರುಪಾಯಿ)
  • ಅಮೆರಿಕ: 1,145 ಡಾಲರ್ (1,00,980 ರುಪಾಯಿ)
  • ಸಿಂಗಾಪುರ: 1,470 ಸಿಂಗಾಪುರ್ ಡಾಲರ್ (1,00,900 ರುಪಾಯಿ)
  • ಕತಾರ್: 4,120 ಕತಾರಿ ರಿಯಾಲ್ (99,690 ರೂ)
  • ಸೌದಿ ಅರೇಬಿಯಾ: 4,190 ಸೌದಿ ರಿಯಾಲ್ (98,530 ರುಪಾಯಿ)
  • ಓಮನ್: 435 ಒಮಾನಿ ರಿಯಾಲ್ (99,650 ರುಪಾಯಿ)
  • ಕುವೇತ್: 333.70 ಕುವೇತಿ ದಿನಾರ್ (96,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 13,800 ರೂ
  • ಚೆನ್ನೈ: 14,800 ರೂ
  • ಮುಂಬೈ: 13,800 ರೂ
  • ದೆಹಲಿ: 13,800 ರೂ
  • ಕೋಲ್ಕತಾ: 13,800 ರೂ
  • ಕೇರಳ: 14,800 ರೂ
  • ಅಹ್ಮದಾಬಾದ್: 13,800 ರೂ
  • ಜೈಪುರ್: 13,800 ರೂ
  • ಲಕ್ನೋ: 13,800 ರೂ
  • ಭುವನೇಶ್ವರ್: 14,800 ರೂ
  • ಪುಣೆ: 13,800

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್