Gold Rate Today: 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ

Bullion Market 2026 February 23rd: ಸೋಮವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ ಕಂಡಿವೆ. ಚಿನ್ನದ ಬೆಲೆ 190 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 25 ರೂ ಜಿಗಿದಿದೆ. ಆಭರಣ ಚಿನ್ನದ ಬೆಲೆ 14,600 ರೂನಿಂದ 14,790 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,101 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 300 ರೂಗೆ ಏರಿದೆ. ಚೆನ್ನೈ ಮೊದಲಾದೆಡೆಯೂ ಬೆಲೆ 300 ರೂನಲ್ಲಿ ಇದೆ.

Gold Rate Today: 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ
ಚಿನ್ನ

Updated on: Feb 23, 2026 | 11:37 AM

ಬೆಂಗಳೂರು, ಫೆಬ್ರುವರಿ 23: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿವೆ. ವಾರಾಂತ್ಯದಲ್ಲಿ ಗ್ರಾಮ್​ಗೆ 285 ರೂನಷ್ಟು ಏರಿದ್ದ ಚಿನ್ನದ ಬೆಲೆ ಸೋಮವಾರ 190 ರೂ ಹೆಚ್ಚಳಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) ಮತ್ತೆ 16,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆಯಾಗಿದೆ. ಇಂದು ಒಂದೇ ದಿನ ಗ್ರಾಮ್​ಗೆ 25 ರೂನಷ್ಟು ಏರಿ 300 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,47,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 30,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,47,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 30,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,135 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,790 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,101 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,135 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,790 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,790 ರೂ
  • ಚೆನ್ನೈ: 14,860 ರೂ
  • ಮುಂಬೈ: 14,790 ರೂ
  • ದೆಹಲಿ: 14,805 ರೂ
  • ಕೋಲ್ಕತಾ: 14,790 ರೂ
  • ಕೇರಳ: 14,790 ರೂ
  • ಅಹ್ಮದಾಬಾದ್: 14,795 ರೂ
  • ಜೈಪುರ್: 14,805 ರೂ
  • ಲಕ್ನೋ: 14,805 ರೂ
  • ಭುವನೇಶ್ವರ್: 14,790 ರೂ

ಇದನ್ನೂ ಓದಿ: ಶ್ರೀಮಂತ ದೇಶಗಳಿಗೆ ಎಐ ಕುತ್ತು; ಶೇ. 60 ಉದ್ಯೋಗನಷ್ಟ ಸಾಧ್ಯತೆ: ಐಎಂಎಫ್ ಎಚ್ಚರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 613 ರಿಂಗಿಟ್ (14,183 ರುಪಾಯಿ)
  • ದುಬೈ: 569.75 ಡಿರಾಮ್ (14,068 ರುಪಾಯಿ)
  • ಅಮೆರಿಕ: 159 ಡಾಲರ್ (14,423 ರುಪಾಯಿ)
  • ಸಿಂಗಾಪುರ: 204.10 ಸಿಂಗಾಪುರ್ ಡಾಲರ್ (14,629 ರುಪಾಯಿ)
  • ಕತಾರ್: 559 ಕತಾರಿ ರಿಯಾಲ್ (13,904 ರೂ)
  • ಸೌದಿ ಅರೇಬಿಯಾ: 578 ಸೌದಿ ರಿಯಾಲ್ (13,975 ರುಪಾಯಿ)
  • ಓಮನ್: 60.45 ಒಮಾನಿ ರಿಯಾಲ್ (14,243 ರುಪಾಯಿ)
  • ಕುವೇತ್: 46.52 ಕುವೇತಿ ದಿನಾರ್ (13,812 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 300 ರೂ
  • ಚೆನ್ನೈ: 300 ರೂ
  • ಮುಂಬೈ: 300 ರೂ
  • ದೆಹಲಿ: 300 ರೂ
  • ಕೋಲ್ಕತಾ: 300 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 300 ರೂ
  • ಜೈಪುರ್: 300 ರೂ
  • ಲಕ್ನೋ: 300 ರೂ
  • ಭುವನೇಶ್ವರ್: 300 ರೂ
  • ಪುಣೆ: 300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us