AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 October 23rd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಇಂದು ಗುರುವಾರ ಇಳಿಕೆ ಕಂಡಿವೆ. ಚಿನ್ನ ಬೆಲೆ 200 ಕಡಿಮೆಯಾದರೆ, ಬೆಳ್ಳಿ ಬೆಲೆ ತೀವ್ರ ಕುಸಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,660 ರೂನಿಂದ 11,465 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,508 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದ ಕಡೆ 159 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 174 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 23, 2025 | 3:05 PM

Share

ಬೆಂಗಳೂರು, ಅಕ್ಟೋಬರ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 200 ರೂಗಳಷ್ಟು ತಗ್ಗಿದೆ. ಅಪರಂಜಿ ಚಿನ್ನದ ಬೆಲೆ (gold rate) 13,000 ರೂ ಗಡಿಯೊಳಗೆ ಬಂದಿದೆ. ಆಭರಣ ಚಿನ್ನದ ಬೆಲೆ 12,000 ರೂ ಗಡಿಯೊಳಗೆ ಕುಸಿದಿದೆ. ವಿದೇಶಗಳಲ್ಲೂ ಇದರ ಬೆಲೆ ಇಳಿಮುಖವಾಗಿದೆ. ಬೆಳ್ಳಿ ಬೆಲೆಯಂತೂ ಪ್ರಚಂಡವಾಗಿ ಏರಿದ ರೀತಿಯಲ್ಲೇ ಕುಸಿತವನ್ನೂ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,14,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,25,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,14,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,400 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,508 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,465 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,381 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 159 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,508 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,465 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 159 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,465 ರೂ
  • ಚೆನ್ನೈ: 11,500 ರೂ
  • ಮುಂಬೈ: 11,465 ರೂ
  • ದೆಹಲಿ: 11,480 ರೂ
  • ಕೋಲ್ಕತಾ: 11,465 ರೂ
  • ಕೇರಳ: 11,465 ರೂ
  • ಅಹ್ಮದಾಬಾದ್: 11,470 ರೂ
  • ಜೈಪುರ್: 11,480 ರೂ
  • ಲಕ್ನೋ: 11,480 ರೂ
  • ಭುವನೇಶ್ವರ್: 11,465 ರೂ

ಇದನ್ನೂ ಓದಿ: ಅಕ್ಟೋಬರ್​ನಲ್ಲಿ ಅತಿಹೆಚ್ಚು ಫಿಕ್ಸೆಡ್ ಡೆಪಾಸಿಟ್ ರೇಟ್ ಕೊಡುವ ಬ್ಯಾಂಕುಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 545 ರಿಂಗಿಟ್ (11,331 ರುಪಾಯಿ)
  • ದುಬೈ: 454.25 ಡಿರಾಮ್ (10,876 ರುಪಾಯಿ)
  • ಅಮೆರಿಕ: 125.50 ಡಾಲರ್ (11,037 ರುಪಾಯಿ)
  • ಸಿಂಗಾಪುರ: 165.10 ಸಿಂಗಾಪುರ್ ಡಾಲರ್ (11,175 ರುಪಾಯಿ)
  • ಕತಾರ್: 448 ಕತಾರಿ ರಿಯಾಲ್ (10,808 ರೂ)
  • ಸೌದಿ ಅರೇಬಿಯಾ: 462 ಸೌದಿ ರಿಯಾಲ್ (10,832 ರುಪಾಯಿ)
  • ಓಮನ್: 47.60 ಒಮಾನಿ ರಿಯಾಲ್ (10,873 ರುಪಾಯಿ)
  • ಕುವೇತ್: 37.05 ಕುವೇತಿ ದಿನಾರ್ (10,629 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 159 ರೂ
  • ಚೆನ್ನೈ: 174 ರೂ
  • ಮುಂಬೈ: 159 ರೂ
  • ದೆಹಲಿ: 159 ರೂ
  • ಕೋಲ್ಕತಾ: 159 ರೂ
  • ಕೇರಳ: 174 ರೂ
  • ಅಹ್ಮದಾಬಾದ್: 159 ರೂ
  • ಜೈಪುರ್: 159 ರೂ
  • ಲಕ್ನೋ: 159 ರೂ
  • ಭುವನೇಶ್ವರ್: 174 ರೂ
  • ಪುಣೆ: 159

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!