AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: 11,400 ರೂ ದಾಟಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Bullion Market 2025 September 23rd: ಚಿನ್ನ ಮತ್ತು ಬೆಳ್ಳಿ ಬೆಲೆಗಳ ದಾಖಲೆ ಓಟ ನಿಲ್ಲುತ್ತಿಲ್ಲ. ಎರಡೂ ಕೂಡ ಹೊಸ ಮೈಲಿಗಲ್ಲು ಸೃಷ್ಟಿಸುತ್ತಿವೆ. 22 ಕ್ಯಾರಟ್ ಚಿನ್ನದ ಬೆಲೆ 10,320 ರೂನಿಂದ 10,480 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 11,258 ರೂನಿಂದ 11,433 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 139 ರೂಗೆ ಏರಿದರೆ, ಚೆನ್ನೈ ಮೊದಲಾದೆಡೆ ಬೆಲೆ 149 ರೂಗೆ ಏರಿದೆ.

Gold Rate Today Bangalore: 11,400 ರೂ ದಾಟಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 23, 2025 | 11:14 AM

Share

ಬೆಂಗಳೂರು, ಸೆಪ್ಟೆಂಬರ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದೂ ಏರಿವೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 10,400 ರೂ ಗಡಿ ದಾಟಿ 10,500 ರೂ ಗಡಿ ಸಮೀಪಕ್ಕೆ ದೌಡಾಯಿಸಿದೆ. ಅಪರಂಜಿ ಚಿನ್ನದ ಬೆಲೆ (gold rate) 11,400 ರೂ ಗಡಿ ದಾಟಿದೆ. ಈ ಮೈಲಿಗಲ್ಲು ಇದೇ ಮೊದಲ ಬಾರಿಗೆ ಮುಟ್ಟಿರುವುದು. ವಿದೇಶಗಳಲ್ಲೂ ಅನೇಕ ಕಡೆ ಇದರ ಬೆಲೆ ಹೈಜಂಪ್ ಆಗಿದೆ. ಬೆಳ್ಳಿ ಬೆಲೆಯ ದಾಖಲೆ ಓಟವೂ ಮುಂದುವರಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 150 ರೂ ಸಮೀಪಿಸಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,04,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,14,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,04,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,900 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,04,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,14,330 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 85,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,390 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,04,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,14,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,390 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 1,04,800 ರೂ
  • ಚೆನ್ನೈ: 1,04,800 ರೂ
  • ಮುಂಬೈ: 1,04,800 ರೂ
  • ದೆಹಲಿ: 1,04,950 ರೂ
  • ಕೋಲ್ಕತಾ: 1,04,800 ರೂ
  • ಕೇರಳ: 1,04,800 ರೂ
  • ಅಹ್ಮದಾಬಾದ್: 1,04,850 ರೂ
  • ಜೈಪುರ್: 1,04,950 ರೂ
  • ಲಕ್ನೋ: 1,04,950 ರೂ
  • ಭುವನೇಶ್ವರ್: 1,04,800 ರೂ

ಇದನ್ನೂ ಓದಿ: ಚಿನ್ನವನ್ನೂ ಮೀರಿಸಿದ ಬೆಳ್ಳಿ; ಒಂದು ವರ್ಷದಲ್ಲಿ ವಿವಿಧ ಹೂಡಿಕೆಗಳು ತಂದ ಲಾಭ ಎಷ್ಟು ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,900 ರಿಂಗಿಟ್ (1,03,300 ರುಪಾಯಿ)
  • ದುಬೈ: 4,150 ಡಿರಾಮ್ (1,00,150 ರುಪಾಯಿ)
  • ಅಮೆರಿಕ: 1,160 ಡಾಲರ್ (1,02,660 ರುಪಾಯಿ)
  • ಸಿಂಗಾಪುರ: 1,487 ಸಿಂಗಾಪುರ್ ಡಾಲರ್ (1,02,600 ರುಪಾಯಿ)
  • ಕತಾರ್: 4,175 ಕತಾರಿ ರಿಯಾಲ್ (1,00,370 ರೂ)
  • ಸೌದಿ ಅರೇಬಿಯಾ: 4,250 ಸೌದಿ ರಿಯಾಲ್ (1,00,280 ರುಪಾಯಿ)
  • ಓಮನ್: 440.50 ಒಮಾನಿ ರಿಯಾಲ್ (1,01,250 ರುಪಾಯಿ)
  • ಕುವೇತ್: 339.60 ಕುವೇತಿ ದಿನಾರ್ (98,600 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 13,900 ರೂ
  • ಚೆನ್ನೈ: 14,900 ರೂ
  • ಮುಂಬೈ: 13,900 ರೂ
  • ದೆಹಲಿ: 13,900 ರೂ
  • ಕೋಲ್ಕತಾ: 13,900 ರೂ
  • ಕೇರಳ: 14,900 ರೂ
  • ಅಹ್ಮದಾಬಾದ್: 13,900 ರೂ
  • ಜೈಪುರ್: 13,900 ರೂ
  • ಲಕ್ನೋ: 13,900 ರೂ
  • ಭುವನೇಶ್ವರ್: 14,900 ರೂ
  • ಪುಣೆ: 13,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ