AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ ಹೊಸ ದಾಖಲೆ; ಚಿನ್ನವೂ ಭರ್ಜರಿ ಏರಿಕೆ

Bullion Market 2025 August 24th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಭರ್ಜರಿ ಏರಿಕೆ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 9,215 ರೂನಿಂದ 9,315 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 10,053 ರೂನಿಂದ 10,162 ರೂಗೆ ಏರಿದೆ. ಬೆಳ್ಳಿ ಬೆಲೆ ಕರ್ನಾಟಕ ಮೊದಲಾದ ಕಡೆ 120 ರೂಗೆ ಏರಿ ಹೊಸ ದಾಖಲೆ ಬರೆದಿದೆ, ತಮಿಳುನಾಡು, ಕೇರಳ ಇತ್ಯಾದಿ ಕಡೆ ಬೆಲೆ 130 ರೂಗೆ ಏರಿದೆ.

Gold Rate Today Bangalore: ಬೆಳ್ಳಿ ಬೆಲೆ ಹೊಸ ದಾಖಲೆ; ಚಿನ್ನವೂ ಭರ್ಜರಿ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 24, 2025 | 11:15 AM

Share

ಬೆಂಗಳೂರು, ಆಗಸ್ಟ್ 24: ಕಳೆದ ಎರಡು ವಾರದಲ್ಲಿ ಬಹುತೇಕ ದಿನಗಳು ಇಳಿಕೆ ಕಂಡಿದ್ದ ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಭರ್ಜರಿ ಹೆಚ್ಚಳ ಕಂಡಿದೆ. ಗ್ರಾಮ್​ಗೆ 100 ರೂ ಏರಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ (gold rate) 9,215 ರೂ ಇದ್ದದ್ದು 9,315 ರೂಗೆ ಏರಿದೆ. ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಚೆನ್ನೈನಲ್ಲಿ ಇದರ ಬೆಲೆ ಮೊದಲ ಬಾರಿಗೆ 130 ರೂ ಗಡಿ ಮುಟ್ಟಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ 120 ರೂ ಗಡಿ ಮುಟ್ಟಿದೆ. ಕಳೆದ ತಿಂಗಳು 119 ರೂಗೆ ಏರಿದ್ದು ಸಾರ್ವಕಾಲಿಕ ದಾಖಲೆ ಎನಿಸಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,000 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,620 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,214 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,200 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,150 ರೂ
  • ಚೆನ್ನೈ: 93,150 ರೂ
  • ಮುಂಬೈ: 93,150 ರೂ
  • ದೆಹಲಿ: 93,300 ರೂ
  • ಕೋಲ್ಕತಾ: 91,150 ರೂ
  • ಕೇರಳ: 93,150 ರೂ
  • ಅಹ್ಮದಾಬಾದ್: 93,200 ರೂ
  • ಜೈಪುರ್: 93,300 ರೂ
  • ಲಕ್ನೋ: 93,300 ರೂ
  • ಭುವನೇಶ್ವರ್: 93,150 ರೂ

ಇದನ್ನೂ ಓದಿ: ಮೋದಿ ಭೇಟಿ ವೇಳೆ 6 ಲಕ್ಷ ಕೋಟಿ ರೂ ಹೂಡಿಕೆ ಪ್ರಕಟಿಸಲಿದೆ ಜಪಾನ್

ಇದನ್ನೂ ಓದಿ
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,420 ರಿಂಗಿಟ್ (91,130 ರುಪಾಯಿ)
  • ದುಬೈ: 3,762.50 ಡಿರಾಮ್ (89,460 ರುಪಾಯಿ)
  • ಅಮೆರಿಕ: 1,050 ಡಾಲರ್ (91,700 ರುಪಾಯಿ)
  • ಸಿಂಗಾಪುರ: 1,337 ಸಿಂಗಾಪುರ್ ಡಾಲರ್ (91,130 ರುಪಾಯಿ)
  • ಕತಾರ್: 3,785 ಕತಾರಿ ರಿಯಾಲ್ (90,690 ರೂ)
  • ಸೌದಿ ಅರೇಬಿಯಾ: 3,840 ಸೌದಿ ರಿಯಾಲ್ (89,360 ರುಪಾಯಿ)
  • ಓಮನ್: 399 ಒಮಾನಿ ರಿಯಾಲ್ (90,950 ರುಪಾಯಿ)
  • ಕುವೇತ್: 306.60 ಕುವೇತಿ ದಿನಾರ್ (87,680 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,000 ರೂ
  • ಚೆನ್ನೈ: 13,000 ರೂ
  • ಮುಂಬೈ: 12,000 ರೂ
  • ದೆಹಲಿ: 12,000 ರೂ
  • ಕೋಲ್ಕತಾ: 12,000 ರೂ
  • ಕೇರಳ: 13,000 ರೂ
  • ಅಹ್ಮದಾಬಾದ್: 12,000 ರೂ
  • ಜೈಪುರ್: 12,000 ರೂ
  • ಲಕ್ನೋ: 12,000 ರೂ
  • ಭುವನೇಶ್ವರ್: 13,000 ರೂ
  • ಪುಣೆ: 12,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ