
ಬೆಂಗಳೂರು, ಅಕ್ಟೋಬರ್ 24: ಎರಡು ದಿನ ಇಳಿದಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಏರಿಕೆಯ ಹಾದಿಗೆ ಬಂದಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯ (silver rates) ಭರ್ಜರಿ ಇಳಿಕೆ ಮುಂದುವರಿದಿದೆ. ಇಂದೂ ಕೂಡ ಬೆಳ್ಳಿ ಬೆಲೆ ಬರೋಬ್ಬರಿ 3 ರೂ ಕಡಿಮೆಗೊಂಡಿದೆ. 159 ರೂ ಇದ್ದ ಬೆಲೆ 156 ರೂಗೆ ಬಂದಿದೆ. ಬೆಂಗಳೂರಿನಲ್ಲಿ 1 ರೂ ಮಾತ್ರ ಕಡಿಮೆಗೊಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಮತ್ತೆ 11,500 ರೂ ಗಡಿ ಮುಟ್ಟಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,15,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,25,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,15,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 15,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,100 ರೂ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಪೋಸ್ಟ್ ಆಫೀಸ್ ಪಿಪಿಎಫ್ ಸ್ಕೀಮ್ ಮೂಲಕ 15 ವರ್ಷದಲ್ಲಿ 40 ಲಕ್ಷ ರೂವರೆಗೆ ಆದಾಯ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ