AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 September 25th: ಚಿನ್ನದ ಬೆಲೆ ಇಂದು ಗುರುವಾರ ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಇಲ್ಲ. ಆಭರಣ ಚಿನ್ನದ ಬೆಲೆ 10,575 ರೂನಿಂದ 10,490 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 11,444 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 140 ರೂ ಇದ್ದರೆ, ಚೆನ್ನೈ ಹಾಗೂ ಇನ್ನೂ ಕೆಲವೆಡೆ ಬೆಲೆ 150 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 25, 2025 | 10:38 AM

Share

ಬೆಂಗಳೂರು, ಸೆಪ್ಟೆಂಬರ್ 25: ಚಿನ್ನದ ಬೆಲೆ ಸತತ ಎರಡನೇ ಬಾರಿ ಕಡಿಮೆಗೊಂಡಿದೆ. ಇಂದು ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 85 ರೂನಷ್ಟು ತಗ್ಗಿದರೆ, ಅಪರಂಜಿ ಚಿನ್ನದ ಬೆಲೆ 93 ರೂ ಇಳಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ (gold rate) 10,500 ರೂ ಗಡಿಗಿಂತ ಕೆಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆ ಆಗಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,04,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,14,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 14,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,04,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 14,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 15,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 25ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,444 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,490 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 8,583 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 140 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,444 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,490 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 140 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 10,490 ರೂ
  • ಚೆನ್ನೈ: 10,510 ರೂ
  • ಮುಂಬೈ: 10,490 ರೂ
  • ದೆಹಲಿ: 10,505 ರೂ
  • ಕೋಲ್ಕತಾ: 10,490 ರೂ
  • ಕೇರಳ: 10,490 ರೂ
  • ಅಹ್ಮದಾಬಾದ್: 10,495 ರೂ
  • ಜೈಪುರ್: 10,505 ರೂ
  • ಲಕ್ನೋ: 10,505 ರೂ
  • ಭುವನೇಶ್ವರ್: 10,490 ರೂ

ಇದನ್ನೂ ಓದಿ: ಇಪಿಎಫ್​ಒದ ಬಹುನಿರೀಕ್ಷಿತ ಎಟಿಎಂ ಫೀಚರ್: ಜನವರಿಯಿಂದ ಸಿಗುತ್ತಾ ಈ ಸೌಲಭ್ಯ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 491 ರಿಂಗಿಟ್ (10,328 ರುಪಾಯಿ)
  • ದುಬೈ: 419.50 ಡಿರಾಮ್ (10,121 ರುಪಾಯಿ)
  • ಅಮೆರಿಕ: 117 ಡಾಲರ್ (10,369 ರುಪಾಯಿ)
  • ಸಿಂಗಾಪುರ: 149.20 ಸಿಂಗಾಪುರ್ ಡಾಲರ್ (10,267 ರುಪಾಯಿ)
  • ಕತಾರ್: 419.50 ಕತಾರಿ ರಿಯಾಲ್ (10,199 ರೂ)
  • ಸೌದಿ ಅರೇಬಿಯಾ: 427 ಸೌದಿ ರಿಯಾಲ್ (10,089 ರುಪಾಯಿ)
  • ಓಮನ್: 44.40 ಒಮಾನಿ ರಿಯಾಲ್ (10,219 ರುಪಾಯಿ)
  • ಕುವೇತ್: 33.81 ಕುವೇತಿ ದಿನಾರ್ (9,809 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 140 ರೂ
  • ಚೆನ್ನೈ: 150 ರೂ
  • ಮುಂಬೈ: 140 ರೂ
  • ದೆಹಲಿ: 140 ರೂ
  • ಕೋಲ್ಕತಾ: 140 ರೂ
  • ಕೇರಳ: 150 ರೂ
  • ಅಹ್ಮದಾಬಾದ್: 140 ರೂ
  • ಜೈಪುರ್: 140 ರೂ
  • ಲಕ್ನೋ: 140 ರೂ
  • ಭುವನೇಶ್ವರ್: 150 ರೂ
  • ಪುಣೆ: 140

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ