Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 January 26th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಏರಿಕೆಯಾಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 275 ರೂಗಳಷ್ಟು ಏರಿದೆ. ಆಭರಣ ಚಿನ್ನದ ಬೆಲೆ 14,640 ರೂನಿಂದ 14,915 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,271 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 340 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 375 ರೂ ಆಗಿದೆ.

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jan 26, 2026 | 11:46 AM

ಬೆಂಗಳೂರು, ಜನವರಿ 26: ಚಿನ್ನದ ಬೆಲೆ ಭರ್ಜರಿ ಏರಿಕೆ ಮುಂದುವರಿದೆ. ಬೆಳ್ಳಿ ಬೆಲೆಯೂ ಭರ್ಜರಿಯಾಗಿ ಏರಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿ ದಾಟಿ ಹೋಗಿದೆ. ಆಭರಣ ಚಿನ್ನದ ಬೆಲೆ (Gold Rate) 15,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ತೀವ್ರವಾಗಿ ಹೆಚ್ಚಿದೆ. ಬೆಳ್ಳಿ ಬೆಲೆಯೂ ಗಗನಕ್ಕೇರುತ್ತಲೇ ಇದೆ. ಚೆನ್ನೈ ಮೊದಲಾದ ಕಡೆ ಬೆಳ್ಳಿ ಬೆಲೆ ಒಂದು ಕಿಲೋಗೆ 3,75,000 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,49,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,62,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 34,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,49,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 34,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 37,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,271 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,915 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,203 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,271 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,915 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,915 ರೂ
  • ಚೆನ್ನೈ: 15,025 ರೂ
  • ಮುಂಬೈ: 14,915 ರೂ
  • ದೆಹಲಿ: 14,930 ರೂ
  • ಕೋಲ್ಕತಾ: 14,915 ರೂ
  • ಕೇರಳ: 14,915 ರೂ
  • ಅಹ್ಮದಾಬಾದ್: 14,920 ರೂ
  • ಜೈಪುರ್: 14,930 ರೂ
  • ಲಕ್ನೋ: 14,930 ರೂ
  • ಭುವನೇಶ್ವರ್: 14,915 ರೂ

ಇದನ್ನೂ ಓದಿ: ಯೂರೋಪ್​ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 630 ರಿಂಗಿಟ್ (14,527 ರುಪಾಯಿ)
  • ದುಬೈ: 556.50 ಡಿರಾಮ್ (13,872 ರುಪಾಯಿ)
  • ಅಮೆರಿಕ: 155 ಡಾಲರ್ (14,195 ರುಪಾಯಿ)
  • ಸಿಂಗಾಪುರ: 200.60 ಸಿಂಗಾಪುರ್ ಡಾಲರ್ (14,482 ರುಪಾಯಿ)
  • ಕತಾರ್: 552 ಕತಾರಿ ರಿಯಾಲ್ (13,867 ರೂ)
  • ಸೌದಿ ಅರೇಬಿಯಾ: 563 ಸೌದಿ ರಿಯಾಲ್ (13,746 ರುಪಾಯಿ)
  • ಓಮನ್: 59 ಒಮಾನಿ ರಿಯಾಲ್ (14,031 ರುಪಾಯಿ)
  • ಕುವೇತ್: 45.26 ಕುವೇತಿ ದಿನಾರ್ (13,584 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 340 ರೂ
  • ಚೆನ್ನೈ: 375 ರೂ
  • ಮುಂಬೈ: 340 ರೂ
  • ದೆಹಲಿ: 340 ರೂ
  • ಕೋಲ್ಕತಾ: 340 ರೂ
  • ಕೇರಳ: 375 ರೂ
  • ಅಹ್ಮದಾಬಾದ್: 340 ರೂ
  • ಜೈಪುರ್: 340 ರೂ
  • ಲಕ್ನೋ: 340 ರೂ
  • ಭುವನೇಶ್ವರ್: 375 ರೂ
  • ಪುಣೆ: 340

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us