Gold Rates: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 March 26th: ಚಿನ್ನದ ಬೆಲೆ ಗುರುವಾರವೂ ಹೆಚ್ಚಿದೆ. ಗ್ರಾಮ್​ಗೆ 20 ರೂನಷ್ಟು ಏರಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,445 ರೂನಿಂದ 13,465 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,689 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rates: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Shutterstock

Updated on: Mar 26, 2026 | 11:36 AM

ಬೆಂಗಳೂರು, ಮಾರ್ಚ್ 26: ಚಿನ್ನದ ಬೆಲೆ ಸತತ ಎರಡನೇ ಬಾರಿ ಹೆಚ್ಚಿದೆ. ನಿನ್ನೆ ಭರ್ಜರಿಯಾಗಿ ಏರಿದ್ದ ಬಂಗಾರದ ದರ (Gold Rates) ಇವತ್ತು ಗುರುವಾರ ಸ್ವಲ್ಪ ಮಟ್ಟಿಗೆ ಹೆಚ್ಚಳ ಕಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆಯಲ್ಲಿ ಏರಿಕೆಯಾಗಿದೆ. ಕೆಲವೆಡೆ ಮಾತ್ರ ಬೆಲೆ ತುಸು ತಗ್ಗಿದೆ. ಇನ್ನು, ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,46,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,34,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,689 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,465 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,017 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,689 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,465 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,465 ರೂ
  • ಚೆನ್ನೈ: 13,670 ರೂ
  • ಮುಂಬೈ: 13,465 ರೂ
  • ದೆಹಲಿ: 13,480 ರೂ
  • ಕೋಲ್ಕತಾ: 13,465 ರೂ
  • ಕೇರಳ: 13,465 ರೂ
  • ಅಹ್ಮದಾಬಾದ್: 13,470 ರೂ
  • ಜೈಪುರ್: 13,480 ರೂ
  • ಲಕ್ನೋ: 13,480 ರೂ
  • ಭುವನೇಶ್ವರ್: 13,465 ರೂ

ಇದನ್ನೂ ಓದಿ: ಪಿಎಂ ಎಸ್​ವೈಎಂ ಸ್ಕೀಮ್; ತಿಂಗಳಿಗೆ ಕೇವಲ 55 ರೂ ಹೂಡಿಕೆ; ಉತ್ತಮ ಮಾಸಿಕ ವರಮಾನ ಸೃಷ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 558 ರಿಂಗಿಟ್ (13,117 ರುಪಾಯಿ)
  • ದುಬೈ: 510 ಡಿರಾಮ್ (13,032 ರುಪಾಯಿ)
  • ಅಮೆರಿಕ: 142 ಡಾಲರ್ (13,328 ರುಪಾಯಿ)
  • ಸಿಂಗಾಪುರ: 180.90 ಸಿಂಗಾಪುರ್ ಡಾಲರ್ (13,244 ರುಪಾಯಿ)
  • ಕತಾರ್: 506.50 ಕತಾರಿ ರಿಯಾಲ್ (13,037 ರೂ)
  • ಸೌದಿ ಅರೇಬಿಯಾ: 516 ಸೌದಿ ರಿಯಾಲ್ (12,910 ರುಪಾಯಿ)
  • ಓಮನ್: 54 ಒಮಾನಿ ರಿಯಾಲ್ (13,166 ರುಪಾಯಿ)
  • ಕುವೇತ್: 41.75 ಕುವೇತಿ ದಿನಾರ್ (12,779 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 260 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 260 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us