AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ಬೆಲೆ ಭಾರೀ ಜಿಗಿತ

Bullion Market 2025 September 26th: ಎರಡು ದಿನ ಸತತವಾಗಿ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಬಂದಿದೆ. 22 ಕ್ಯಾರಟ್ ಚಿನ್ನದ ಬೆಲೆ 10,490 ರೂನಿಂದ 10,530 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 11,488 ರೂಗೆ ಏರಿದೆ. ಬೆಳ್ಳಿ ಬೆಲೆ ಒಮ್ಮೆಲೇ ಮೂರು ರೂ ಹೆಚ್ಚಿದೆ. ಬೆಂಗಳೂರಿನಲ್ಲಿ ಬೆಲೆ 142.60 ರೂ ಇದ್ದರೆ, ಚೆನ್ನೈ ಮೊದಲಾದೆಡೆ 153 ರೂಗೆ ಜಿಗಿದಿದೆ.

Gold Rate Today Bangalore: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ಬೆಲೆ ಭಾರೀ ಜಿಗಿತ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 26, 2025 | 10:37 AM

Share

ಬೆಂಗಳೂರು, ಸೆಪ್ಟೆಂಬರ್ 26: ಇಂದು ಶುಕ್ರವಾರ ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಚೆನ್ನೈ ಮೊದಲಾದ ಕೆಲವೆಡೆ ಇದರ ಬೆಲೆ 153 ರೂಗೆ ಏರಿದೆ. ಮುಂಬೈ ಮೊದಲಾದೆಡೆ ಬೆಲೆ (Gold rates) 143 ರೂ ಆಸುಪಾಸಿನಲ್ಲಿ ಇದೆ. ಸತತ ಎರಡು ಬಾರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಗ್ರಾಮ್​ಗೆ 40 ರೂನಷ್ಟು ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 10,500 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಅಲ್ಪ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,05,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,14,880 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 14,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,05,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 14,260 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 15,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,488 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,530 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 8,616 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 143 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,488 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,530 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 142.60 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 10,530 ರೂ
  • ಚೆನ್ನೈ: 10,550 ರೂ
  • ಮುಂಬೈ: 10,530 ರೂ
  • ದೆಹಲಿ: 10,545 ರೂ
  • ಕೋಲ್ಕತಾ: 10,530 ರೂ
  • ಕೇರಳ: 10,530 ರೂ
  • ಅಹ್ಮದಾಬಾದ್: 10,535 ರೂ
  • ಜೈಪುರ್: 10,545 ರೂ
  • ಲಕ್ನೋ: 10,545 ರೂ
  • ಭುವನೇಶ್ವರ್: 10,530 ರೂ

ಇದನ್ನೂ ಓದಿ: ಟ್ಯಾಕ್ಸ್ ಆಡಿಟ್ ರಿಪೋರ್ಟ್ ಸಲ್ಲಿಸಲು ಗಡುವು ಅಕ್ಟೋಬರ್ 31ರವರೆಗೂ ವಿಸ್ತರಣೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 492 ರಿಂಗಿಟ್ (10,342 ರುಪಾಯಿ)
  • ದುಬೈ: 416.50 ಡಿರಾಮ್ (10,059 ರುಪಾಯಿ)
  • ಅಮೆರಿಕ: 116 ಡಾಲರ್ (10,290 ರುಪಾಯಿ)
  • ಸಿಂಗಾಪುರ: 149.70 ಸಿಂಗಾಪುರ್ ಡಾಲರ್ (10,271 ರುಪಾಯಿ)
  • ಕತಾರ್: 416.50 ಕತಾರಿ ರಿಯಾಲ್ (10,137 ರೂ)
  • ಸೌದಿ ಅರೇಬಿಯಾ: 425 ಸೌದಿ ರಿಯಾಲ್ (10,052 ರುಪಾಯಿ)
  • ಓಮನ್: 44.05 ಒಮಾನಿ ರಿಯಾಲ್ (10,148 ರುಪಾಯಿ)
  • ಕುವೇತ್: 33.91 ಕುವೇತಿ ದಿನಾರ್ (9,837 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 142.6 ರೂ
  • ಚೆನ್ನೈ: 153 ರೂ
  • ಮುಂಬೈ: 143 ರೂ
  • ದೆಹಲಿ: 143 ರೂ
  • ಕೋಲ್ಕತಾ: 143 ರೂ
  • ಕೇರಳ: 153 ರೂ
  • ಅಹ್ಮದಾಬಾದ್: 143 ರೂ
  • ಜೈಪುರ್: 143 ರೂ
  • ಲಕ್ನೋ: 143 ರೂ
  • ಭುವನೇಶ್ವರ್: 153 ರೂ
  • ಪುಣೆ: 143

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ