
ಬೆಂಗಳೂರು, ಡಿಸೆಂಬರ್ 27: ಚಿನ್ನ, ಬೆಳ್ಳಿ ಬೆಲೆಗಳ ಸತತ ಏರಿಕೆ ಮುಂದುವರಿಯುತ್ತಲೇ ಇದೆ. ಶನಿವಾರ ಚಿನ್ನದ ಬೆಲೆ (Gold Rate) 110 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ ಚೆನ್ನೈನಲ್ಲಿ 13,000 ರೂ ಗಡಿ ಮುಟ್ಟಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಇಂದು ಏರಿದೆ. ಬೆಳ್ಳಿ ಬೆಲೆಯಂತೂ ಜಿಗಿಜಿಗಿದು ಓಡುವುದು ಮುಂದುವರಿದಿದೆ. ಶನಿವಾರ ಒಂದು ಗ್ರಾಮ್ ಬೆಳ್ಳಿ ಬೆಲೆ 11 ರೂ ಹೆಚ್ಚಳಗೊಂಡು 251 ರೂ ಮುಟ್ಟಿದೆ. ಚೆನ್ನೈನಲ್ಲಂತೂ ಇದರ ಬೆಲೆ 274 ರೂಗೆ ಏರಿದೆ. ವರ್ಷದ ಹಿಂದೆ ನೂರು ರೂ ಒಳಗಿದ್ದ ಇದರ ಬೆಲೆ ಈಗ ಮೈಝುಮ್ಮೆನಿಸುವಷ್ಟು ಏರಿರುವುದು ಕುತೂಹಲ ಮೂಡಿಸಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,29,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,41,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,29,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,400 ರೂ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: 2025ರಲ್ಲಿ ಭಾರತದ ಬಿಲಿಯನೇರ್ಗಳ ಪಟ್ಟಿ; ಯಾರು ಅತಿ ಶ್ರೀಮಂತರು, ಯಾರ ಶ್ರೀಮಂತಿಕೆ ಹೆಚ್ಚು ಏರಿದ್ದು?
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ