Gold Rate Today Bangalore: ಈ ವಾರಾಂತ್ಯದಲ್ಲೂ ಚಿನ್ನ, ಬೆಳ್ಳಿ ಬೆಲೆ ಇಳಿಕೆ

Bullion Market 2025 July 27th: ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಚಿನ್ನದ ಬೆಲೆ 225 ರೂನಷ್ಟು ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 9,210 ರೂನಿಂದ 9,160 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,000 ರೂ ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದ ಕಡೆ 116 ರೂಗೆ ಇಳಿದಿದೆ. ಚೆನ್ನೈ ಇತ್ಯಾದಿ ಕಡೆ ಬೆಲೆ 126 ರೂಗೆ ಇಳಿದಿದೆ.

Gold Rate Today Bangalore: ಈ ವಾರಾಂತ್ಯದಲ್ಲೂ ಚಿನ್ನ, ಬೆಳ್ಳಿ ಬೆಲೆ ಇಳಿಕೆ
ಚಿನ್ನ

Updated on: Jul 27, 2025 | 10:39 AM

ಬೆಂಗಳೂರು, ಜುಲೈ 27: ಚಿನ್ನದ ಬೆಲೆಯ ಕುಸಿತ ಈ ವಾರಾಂತ್ಯದಲ್ಲೂ ಮುಂದುವರಿದಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 50 ರೂ ಕಡಿಮೆ ಆಗಿದೆ. ಗುರುವಾರ ಮತ್ತು ಶುಕ್ರವಾರ ಎರಡು ದಿನ ಇದರ ಬೆಲೆ (gold rate) 170 ರೂನಷ್ಟು ತಗ್ಗಿತ್ತು. ಬುಧವಾರದ ಬಳಿಕ ಗ್ರಾಮ್​ಗೆ 225 ರನಷ್ಟು ಬೆಲೆ ತಗ್ಗಿದಂತಾಗಿದೆ. ಬೆಳ್ಳಿ ಬೆಲೆಯೂ ಗಣನೀಯ ಇಳಿಕೆ ಕಂಡಿದೆ. 118 ರೂ ಇದ್ದದ್ದು 116 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 27ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,930 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,600 ರೂ
  • ಚೆನ್ನೈ: 91,600 ರೂ
  • ಮುಂಬೈ: 91,600 ರೂ
  • ದೆಹಲಿ: 91,750 ರೂ
  • ಕೋಲ್ಕತಾ: 91,600 ರೂ
  • ಕೇರಳ: 91,600 ರೂ
  • ಅಹ್ಮದಾಬಾದ್: 91,650 ರೂ
  • ಜೈಪುರ್: 91,750 ರೂ
  • ಲಕ್ನೋ: 91,750 ರೂ
  • ಭುವನೇಶ್ವರ್: 91,600 ರೂ

ಇದನ್ನೂ ಓದಿ: ಆನ್​ಲೈನ್ ಕಾರ್ಡ್ ಟ್ರಾನ್ಸಾಕ್ಷನ್ಸ್​ಗೆ ಬಯೋಮೆಟ್ರಿಕ್ ಅಥೆಂಟಿಕೇಶನ್; ಭಾರತದಲ್ಲಿ ಮೊದಲ ಬಾರಿಗೆ ಜಾರಿ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,460 ರಿಂಗಿಟ್ (91,390 ರುಪಾಯಿ)
  • ದುಬೈ: 3,722.50 ಡಿರಾಮ್ (87,670 ರುಪಾಯಿ)
  • ಅಮೆರಿಕ: 1,035 ಡಾಲರ್ (89,530 ರುಪಾಯಿ)
  • ಸಿಂಗಾಪುರ: 1,329 ಸಿಂಗಾಪುರ್ ಡಾಲರ್ (89,720 ರುಪಾಯಿ)
  • ಕತಾರ್: 3,745 ಕತಾರಿ ರಿಯಾಲ್ (88,880 ರೂ)
  • ಸೌದಿ ಅರೇಬಿಯಾ: 3,800 ಸೌದಿ ರಿಯಾಲ್ (87,620 ರುಪಾಯಿ)
  • ಓಮನ್: 395 ಒಮಾನಿ ರಿಯಾಲ್ (88,750 ರುಪಾಯಿ)
  • ಕುವೇತ್: 302.70 ಕುವೇತಿ ದಿನಾರ್ (85,800 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,600 ರೂ
  • ಚೆನ್ನೈ: 12,600 ರೂ
  • ಮುಂಬೈ: 11,600 ರೂ
  • ದೆಹಲಿ: 11,600 ರೂ
  • ಕೋಲ್ಕತಾ: 11,600 ರೂ
  • ಕೇರಳ: 12,600 ರೂ
  • ಅಹ್ಮದಾಬಾದ್: 11,600 ರೂ
  • ಜೈಪುರ್: 11,600 ರೂ
  • ಲಕ್ನೋ: 11,600 ರೂ
  • ಭುವನೇಶ್ವರ್: 12,600 ರೂ
  • ಪುಣೆ: 11,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us