AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ

Bullion Market 2025 November 27th: ಇಂದು ಗುರುವಾರ ಚಿನ್ನದ ಬೆಲೆ ಕಡಿಮೆಗೊಂಡರೆ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 11,725 ರೂನಿಂದ 11,710 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,775 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 173 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 180 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2025 | 11:16 AM

Share

ಬೆಂಗಳೂರು, ನವೆಂಬರ್ 27: ಸತತ ಏರುತ್ತಿದ್ದ ಚಿನ್ನದ ಬೆಲೆ (gold rate) ಇವತ್ತು ಗುರುವಾರ ಅಲ್ಪ ಇಳಿಕೆ ಕಂಡಿದೆ. ಆದರೆ, ಬೆಳ್ಳಿ ಬೆಲೆಯ ನಿರಂತರ ಓಟ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 15 ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆ 4 ರೂ ಏರಿದೆ. ನಿನ್ನೆಯೂ ಕೂಡ ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ ಕಂಡಿತ್ತು. ಎರಡು ದಿನದಲ್ಲಿ ಗ್ರಾಮ್​ಗೆ 6 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,17,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,27,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,17,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,300 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,775 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,710 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,581 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,775 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,710 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,710 ರೂ
  • ಚೆನ್ನೈ: 11,770 ರೂ
  • ಮುಂಬೈ: 11,710 ರೂ
  • ದೆಹಲಿ: 11,725 ರೂ
  • ಕೋಲ್ಕತಾ: 11,710 ರೂ
  • ಕೇರಳ: 11,710 ರೂ
  • ಅಹ್ಮದಾಬಾದ್: 11,715 ರೂ
  • ಜೈಪುರ್: 11,725 ರೂ
  • ಲಕ್ನೋ: 11,725 ರೂ
  • ಭುವನೇಶ್ವರ್: 11,710 ರೂ

ಇದನ್ನೂ ಓದಿ: ಪಿಎಂ ವಿದ್ಯಾಲಕ್ಷ್ಮೀ ಯೋಜನೆ; ಕಡಿಮೆ ಬಡ್ಡಿದರದಲ್ಲಿ 10 ಲಕ್ಷ ರೂವರೆಗೆ ಸಾಲ; ಇದು ಕೇಂದ್ರ ಪ್ರಾಯೋಜಿತ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 530 ರಿಂಗಿಟ್ (11,448 ರುಪಾಯಿ)
  • ದುಬೈ: 463.25 ಡಿರಾಮ್ (11,255 ರುಪಾಯಿ)
  • ಅಮೆರಿಕ: 129.50 ಡಾಲರ್ (11,556 ರುಪಾಯಿ)
  • ಸಿಂಗಾಪುರ: 167.80 ಸಿಂಗಾಪುರ್ ಡಾಲರ್ (11,550 ರುಪಾಯಿ)
  • ಕತಾರ್: 462.50 ಕತಾರಿ ರಿಯಾಲ್ (11,324 ರೂ)
  • ಸೌದಿ ಅರೇಬಿಯಾ: 470 ಸೌದಿ ರಿಯಾಲ್ (11,182 ರುಪಾಯಿ)
  • ಓಮನ್: 49 ಒಮಾನಿ ರಿಯಾಲ್ (11,356 ರುಪಾಯಿ)
  • ಕುವೇತ್: 38.05 ಕುವೇತಿ ದಿನಾರ್ (11,065 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 173 ರೂ
  • ಚೆನ್ನೈ: 180 ರೂ
  • ಮುಂಬೈ: 173 ರೂ
  • ದೆಹಲಿ: 173 ರೂ
  • ಕೋಲ್ಕತಾ: 173 ರೂ
  • ಕೇರಳ: 180 ರೂ
  • ಅಹ್ಮದಾಬಾದ್: 173 ರೂ
  • ಜೈಪುರ್: 173 ರೂ
  • ಲಕ್ನೋ: 173 ರೂ
  • ಭುವನೇಶ್ವರ್: 180 ರೂ
  • ಪುಣೆ: 173

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್