Gold Rate Today: 16,500 ರೂ ಗಡಿದಾಟಿದ ಅಪರಂಜಿ ಚಿನ್ನದ ಬೆಲೆ

Bullion Market 2026 January 28th: ಚಿನ್ನ, ಬೆಳ್ಳಿ ಬೆಲೆಗಳು ಬುಧವಾರ ಭರ್ಜರಿ ಏರಿಕೆ ಹೊಂದಿವೆ. ಚಿನ್ನದ ಬೆಲೆ ಗ್ರಾಮ್​ಗೆ 295 ರೂ ಏರಿದರೆ, ಬೆಳ್ಳಿ ಬೆಲೆ 10-13 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,845 ರೂನಿಂದ 15,140 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,517 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 380 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 400 ರೂ ಆಗಿದೆ.

Gold Rate Today: 16,500 ರೂ ಗಡಿದಾಟಿದ ಅಪರಂಜಿ ಚಿನ್ನದ ಬೆಲೆ
ಚಿನ್ನ

Updated on: Jan 28, 2026 | 12:03 PM

ಬೆಂಗಳೂರು, ಜನವರಿ 28: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಯದ್ವಾತದ್ವಾ ಏರುತ್ತಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 295ರೂನಿಂದ 305 ರೂವರೆಗೆ ಏರಿದೆ. ಬೆಳ್ಳಿ ಬೆಲೆಯಂತೂ ಕಿಲೋಗೆ ನಾಲ್ಕು ಲಕ್ಷ ರೂ ಬೆಲೆ ಮುಟ್ಟಿದೆ. ಆಭರಣ ಚಿನ್ನದ ಬೆಲೆ 15,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 16,500 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,51,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,65,170 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 38,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,51,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 38,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 40,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 28ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,517 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,140 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,146 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 380 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,517 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,140 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 380 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,140 ರೂ
  • ಚೆನ್ನೈ: 15,330 ರೂ
  • ಮುಂಬೈ: 15,140 ರೂ
  • ದೆಹಲಿ: 15,155 ರೂ
  • ಕೋಲ್ಕತಾ: 15,140 ರೂ
  • ಕೇರಳ: 15,140 ರೂ
  • ಅಹ್ಮದಾಬಾದ್: 15,145 ರೂ
  • ಜೈಪುರ್: 15,155 ರೂ
  • ಲಕ್ನೋ: 15,155 ರೂ
  • ಭುವನೇಶ್ವರ್: 15,140 ರೂ

ಇದನ್ನೂ ಓದಿ: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 637 ರಿಂಗಿಟ್ (14,890 ರುಪಾಯಿ)
  • ದುಬೈ: 566.25 ಡಿರಾಮ್ (14,125 ರುಪಾಯಿ)
  • ಅಮೆರಿಕ: 158.50 ಡಾಲರ್ (14,521 ರುಪಾಯಿ)
  • ಸಿಂಗಾಪುರ: 204.90 ಸಿಂಗಾಪುರ್ ಡಾಲರ್ (14,887 ರುಪಾಯಿ)
  • ಕತಾರ್: 563.50 ಕತಾರಿ ರಿಯಾಲ್ (14,164 ರೂ)
  • ಸೌದಿ ಅರೇಬಿಯಾ: 575 ಸೌದಿ ರಿಯಾಲ್ (14,048 ರುಪಾಯಿ)
  • ಓಮನ್: 60.10 ಒಮಾನಿ ರಿಯಾಲ್ (14,301 ರುಪಾಯಿ)
  • ಕುವೇತ್: 46.19 ಕುವೇತಿ ದಿನಾರ್ (13,872 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 380 ರೂ
  • ಚೆನ್ನೈ: 400 ರೂ
  • ಮುಂಬೈ: 380 ರೂ
  • ದೆಹಲಿ: 380 ರೂ
  • ಕೋಲ್ಕತಾ: 380 ರೂ
  • ಕೇರಳ: 400 ರೂ
  • ಅಹ್ಮದಾಬಾದ್: 380 ರೂ
  • ಜೈಪುರ್: 380 ರೂ
  • ಲಕ್ನೋ: 380 ರೂ
  • ಭುವನೇಶ್ವರ್: 400 ರೂ
  • ಪುಣೆ: 380

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us