AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2026 March 29th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆರಡೂ ಹೆಚ್ಚಿವೆ. ಚಿನ್ನದ ಬೆಲೆಯಲ್ಲಿ 310 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 13,265 ರೂನಿಂದ 13,575 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,809 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 29, 2026 | 11:31 AM

Share

ಬೆಂಗಳೂರು, ಮಾರ್ಚ್ 29: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಭರ್ಜರಿಯಾಗಿ ಏರಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದರ ಬೆಲೆ (Gold Rates) ಸತತವಾಗಿ ಹೆಚ್ಚುತ್ತಿದೆ. ವಾರಾಂತ್ಯದಲ್ಲಿ ಗ್ರಾಂಗೆ ಬರೋಬ್ಬರಿ 310 ರೂನಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,35,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 29ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,809 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,575 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,107 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,809 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,575 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,575 ರೂ
  • ಚೆನ್ನೈ: 13,660 ರೂ
  • ಮುಂಬೈ: 13,575 ರೂ
  • ದೆಹಲಿ: 13,590 ರೂ
  • ಕೋಲ್ಕತಾ: 13,575 ರೂ
  • ಕೇರಳ: 13,575 ರೂ
  • ಅಹ್ಮದಾಬಾದ್: 13,580 ರೂ
  • ಜೈಪುರ್: 13,590 ರೂ
  • ಲಕ್ನೋ: 13,590 ರೂ
  • ಭುವನೇಶ್ವರ್: 13,575 ರೂ

ಇದನ್ನೂ ಓದಿ: ಏಪ್ರಿಲ್​ನಲ್ಲಿ ಗುಡ್​ಫ್ರೈಡೆ, ಬಸವಜಯಂತಿ, ಅಂಬೇಡ್ಕರ್ ಜಯಂತಿ; ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 560 ರಿಂಗಿಟ್ (13,229 ರುಪಾಯಿ)
  • ದುಬೈ: 501.25 ಡಿರಾಮ್ (12,934 ರುಪಾಯಿ)
  • ಅಮೆರಿಕ: 140.50 ಡಾಲರ್ (13,317 ರುಪಾಯಿ)
  • ಸಿಂಗಾಪುರ: 180.40 ಸಿಂಗಾಪುರ್ ಡಾಲರ್ (13,265 ರುಪಾಯಿ)
  • ಕತಾರ್: 499 ಕತಾರಿ ರಿಯಾಲ್ (12,976 ರೂ)
  • ಸೌದಿ ಅರೇಬಿಯಾ: 510 ಸೌದಿ ರಿಯಾಲ್ (12,882 ರುಪಾಯಿ)
  • ಓಮನ್: 53.15 ಒಮಾನಿ ರಿಯಾಲ್ (13,086 ರುಪಾಯಿ)
  • ಕುವೇತ್: 41.23 ಕುವೇತಿ ದಿನಾರ್ (12,774 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:26 am, Sun, 29 March 26

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More