AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಓಟ ಮುಂದುವರಿಕೆ

Bullion Market 2025 September 29th: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿಯುತ್ತಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 85 ರೂ ಹೆಚ್ಚಿದೆ. ಬೆಳ್ಳಿ ಬೆಲೆ 1 ರೂ ಏರಿದೆ. ಆಭರಣ ಚಿನ್ನದ ಬೆಲೆ 10,670 ರೂಗೆ ಏರಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 11,640 ರೂ ಮುಟ್ಟಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈನಲ್ಲಿ 150 ರೂ ಮೈಲಿಗಲ್ಲು ಮುಟ್ಟಿದೆ. ಚೆನ್ನೈ ಮೊದಲಾದೆಡೆ 160 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಓಟ ಮುಂದುವರಿಕೆ
ಚಿನ್ನ, ಬೆಳ್ಳಿ ಬೆಲೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 29, 2025 | 11:33 AM

Share

ಬೆಂಗಳೂರು, ಸೆಪ್ಟೆಂಬರ್ 29: ಚಿನ್ನ ಮತ್ತು ಬೆಳ್ಳಿಯ ದಾಖಲೆ ಓಟ ಈ ವಾರವೂ ಮುಂದುವರಿಯುತ್ತಿದೆ. ಬೆಳ್ಳಿ ಬೆಲೆಯಂತೂ ಸಿಕ್ಕಾಪಟ್ಟೆ ಜಿಗಿಯುತ್ತಿದೆ. ಕಳೆದ ವಾರಾಂತ್ಯದಲ್ಲಿ ಬರೋಬ್ಬರಿ 6 ರೂಗಳಷ್ಟು ಜಂಪ್ ಪಡೆದಿದ್ದ ಬೆಳ್ಳಿ ಬೆಲೆ (Silver Rates) ಇವತ್ತು ಸೋಮವಾರ ಒಂದು ರೂ ಹೆಚ್ಚಾಗಿದೆ. ಇದೇ ಮೊದಲ ಬಾರಿಗೆ 150 ರೂ ಮತ್ತು 160 ರೂ ಮೈಲಿಗಲ್ಲು ಮುಟ್ಟಿದೆ. ಕೇವಲ ಎರಡು ವರ್ಷದಲ್ಲಿ ಬೆಳ್ಳಿ ಬೆಲೆ ಕನಿಷ್ಠ ಎರಡು ಪಟ್ಟು ಹೆಚ್ಚಾಗಿದೆ. ಚಿನ್ನವೂ ಬಹುತೇಕ ಇದೇ ವೇಗದಲ್ಲಿ ಬೆಲೆ ಹೆಚ್ಚಳ ಕಾಣುತ್ತಾ ಬರುತ್ತಿದೆ. ಇಂದು ಚಿನ್ನದ ಬೆಲೆ ಗ್​ರಾಮ್​ಗೆ 85 ರೂನಷ್ಟು ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,06,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,16,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,06,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 29ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,640 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,670 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 8,730 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 150 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,640 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,670 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 150 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 10,670 ರೂ
  • ಚೆನ್ನೈ: 10,700 ರೂ
  • ಮುಂಬೈ: 10,670 ರೂ
  • ದೆಹಲಿ: 10,685 ರೂ
  • ಕೋಲ್ಕತಾ: 10,670 ರೂ
  • ಕೇರಳ: 10,670 ರೂ
  • ಅಹ್ಮದಾಬಾದ್: 10,675 ರೂ
  • ಜೈಪುರ್: 10,685 ರೂ
  • ಲಕ್ನೋ: 10,685 ರೂ
  • ಭುವನೇಶ್ವರ್: 10,670 ರೂ

ಇದನ್ನೂ ಓದಿ: 45ನೇ ವಯಸ್ಸಿಗೆ 4.7 ಕೋಟಿ ರೂ; ಬ್ಯುಸಿನೆಸ್ ಇಲ್ಲ, ಷೇರು ಇಲ್ಲ, ಆದರೂ ಸಂಪಾದಿಸಿದ್ದು ಹೇಗೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 494 ರಿಂಗಿಟ್ (10,406 ರುಪಾಯಿ)
  • ದುಬೈ: 419.50 ಡಿರಾಮ್ (10,135 ರುಪಾಯಿ)
  • ಅಮೆರಿಕ: 117 ಡಾಲರ್ (10,382 ರುಪಾಯಿ)
  • ಸಿಂಗಾಪುರ: 151.20 ಸಿಂಗಾಪುರ್ ಡಾಲರ್ (10,404 ರುಪಾಯಿ)
  • ಕತಾರ್: 420 ಕತಾರಿ ರಿಯಾಲ್ (10,225 ರೂ)
  • ಸೌದಿ ಅರೇಬಿಯಾ: 427 ಸೌದಿ ರಿಯಾಲ್ (10,103 ರುಪಾಯಿ)
  • ಓಮನ್: 44.35 ಒಮಾನಿ ರಿಯಾಲ್ (10,220 ರುಪಾಯಿ)
  • ಕುವೇತ್: 34.08 ಕುವೇತಿ ದಿನಾರ್ (9,915 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 150 ರೂ
  • ಚೆನ್ನೈ: 160 ರೂ
  • ಮುಂಬೈ: 150 ರೂ
  • ದೆಹಲಿ: 150 ರೂ
  • ಕೋಲ್ಕತಾ: 150 ರೂ
  • ಕೇರಳ: 160 ರೂ
  • ಅಹ್ಮದಾಬಾದ್: 150 ರೂ
  • ಜೈಪುರ್: 150 ರೂ
  • ಲಕ್ನೋ: 150 ರೂ
  • ಭುವನೇಶ್ವರ್: 160 ರೂ
  • ಪುಣೆ: 150

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ