Gold Rates: ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 April 2nd: ಬುಧವಾರ ಏರಿದ್ದ ಚಿನ್ನ, ಬೆಳ್ಳಿ ಬೆಲೆಗಳು ಗುರುವಾರ ಇಳಿದಿವೆ. ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿದರೆ, ಬೆಳ್ಳಿ ಬೆಲೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,885 ರೂನಿಂದ 13,655 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,897 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ.

Gold Rates: ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Shutterstock

Updated on: Apr 02, 2026 | 2:03 PM

ಬೆಂಗಳೂರು, ಏಪ್ರಿಲ್ 2: ಸತತವಾಗಿ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಒಂದು ಚಿನ್ನದ ಬೆಲೆ (Gold Rates) 230 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿದರೆ, ಇನ್ನೂ ಕೆಲವೆಡೆ ಏರಿದೆ. ಬೆಳ್ಳಿ ಬೆಲೆಯೂ ಕಡಿಮೆಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,897 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,655 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,173 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,897 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,655 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,655 ರೂ
  • ಚೆನ್ನೈ: 13,950 ರೂ
  • ಮುಂಬೈ: 13,655 ರೂ
  • ದೆಹಲಿ: 13,670 ರೂ
  • ಕೋಲ್ಕತಾ: 13,655 ರೂ
  • ಕೇರಳ: 13,655 ರೂ
  • ಅಹ್ಮದಾಬಾದ್: 13,660 ರೂ
  • ಜೈಪುರ್: 13,670 ರೂ
  • ಲಕ್ನೋ: 13,670 ರೂ
  • ಭುವನೇಶ್ವರ್: 13,655 ರೂ

ಇದನ್ನೂ ಓದಿ: ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಆಮದು ಸುಂಕದಿಂದ ವಿನಾಯಿತಿ; ಹಲವು ಉದ್ಯಮಗಳಿಗೆ ಅನುಕೂಲ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 580 ರಿಂಗಿಟ್ (13,404 ರುಪಾಯಿ)
  • ದುಬೈ: 534 ಡಿರಾಮ್ (13,498 ರುಪಾಯಿ)
  • ಅಮೆರಿಕ: 149 ಡಾಲರ್ (13,896 ರುಪಾಯಿ)
  • ಸಿಂಗಾಪುರ: 187.20 ಸಿಂಗಾಪುರ್ ಡಾಲರ್ (13,564 ರುಪಾಯಿ)
  • ಕತಾರ್: 530 ಕತಾರಿ ರಿಯಾಲ್ (13,558 ರೂ)
  • ಸೌದಿ ಅರೇಬಿಯಾ: 543 ಸೌದಿ ರಿಯಾಲ್ (13,490 ರುಪಾಯಿ)
  • ಓಮನ್: 56.45 ಒಮಾನಿ ರಿಯಾಲ್ (13,676 ರುಪಾಯಿ)
  • ಕುವೇತ್: 43.79 ಕುವೇತಿ ದಿನಾರ್ (13,255 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:02 pm, Thu, 2 April 26

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us