Gold Rate Today: ಮುಂದುವರಿದ ಕುಸಿತ; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

Bullion Market 2026 February 2nd: ಸೋಮವಾರ ಚಿನ್ನದ ಬೆಲೆ ಗ್ರಾಮ್​ಗೆ 830 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಬರೋಬ್ಬರಿ 50 ರೂ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 14,720 ರೂನಿಂದ 13,890 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,153 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 300 ರೂಗೆ ತಗ್ಗಿದೆ. ಚೆನ್ನೈ ಮೊದಲಾದೆಡೆಯೂ 300 ರೂ ಇದೆ.

Gold Rate Today: ಮುಂದುವರಿದ ಕುಸಿತ; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ
ಚಿನ್ನ

Updated on: Feb 02, 2026 | 11:47 AM

ಬೆಂಗಳೂರು, ಫೆಬ್ರುವರಿ 2: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ (Gold Rates) ಒಂದು ಗ್ರಾಮ್​ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ. ಗ್ರಾಮ್​ಗೆ 50 ರೂ ಕಡಿಮೆಗೊಂಡು 300 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 30,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 30,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,153 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,890 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,365 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,153 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,890 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,890 ರೂ
  • ಚೆನ್ನೈ: 13,950 ರೂ
  • ಮುಂಬೈ: 13,890 ರೂ
  • ದೆಹಲಿ: 13,905 ರೂ
  • ಕೋಲ್ಕತಾ: 13,890 ರೂ
  • ಕೇರಳ: 13,890 ರೂ
  • ಅಹ್ಮದಾಬಾದ್: 13,895 ರೂ
  • ಜೈಪುರ್: 13,905 ರೂ
  • ಲಕ್ನೋ: 13,905 ರೂ
  • ಭುವನೇಶ್ವರ್: 13,895 ರೂ

ಇದನ್ನೂ ಓದಿ: 16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 625 ರಿಂಗಿಟ್ (14,538 ರುಪಾಯಿ)
  • ದುಬೈ: 545.75 ಡಿರಾಮ್ (13,624 ರುಪಾಯಿ)
  • ಅಮೆರಿಕ: 152 ಡಾಲರ್ (13,938 ರುಪಾಯಿ)
  • ಸಿಂಗಾಪುರ: 187.30 ಸಿಂಗಾಪುರ್ ಡಾಲರ್ (13,501 ರುಪಾಯಿ)
  • ಕತಾರ್: 542 ಕತಾರಿ ರಿಯಾಲ್ (13,637 ರೂ)
  • ಸೌದಿ ಅರೇಬಿಯಾ: 553 ಸೌದಿ ರಿಯಾಲ್ (13,519 ರುಪಾಯಿ)
  • ಓಮನ್: 57.90 ಒಮಾನಿ ರಿಯಾಲ್ (13,791 ರುಪಾಯಿ)
  • ಕುವೇತ್: 44.58 ಕುವೇತಿ ದಿನಾರ್ (13,389 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 300 ರೂ
  • ಚೆನ್ನೈ: 300 ರೂ
  • ಮುಂಬೈ: 300 ರೂ
  • ದೆಹಲಿ: 300 ರೂ
  • ಕೋಲ್ಕತಾ: 300 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 300 ರೂ
  • ಜೈಪುರ್: 300 ರೂ
  • ಲಕ್ನೋ: 300 ರೂ
  • ಭುವನೇಶ್ವರ್: 300 ರೂ
  • ಪುಣೆ: 300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ