Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 January 2nd: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಶುಕ್ರವಾರ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ 105 ರೂ ಹೆಚ್ಚಿದರೆ, ಬೆಳ್ಳಿ 4 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 12,380 ರೂನಿಂದ 12,485 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,620 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 242 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 260 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jan 02, 2026 | 3:26 PM

ಬೆಂಗಳೂರು, ಜನವರಿ 2: ಚಿನ್ನದ ಬೆಲೆ (Gold Rate) ಇವತ್ತು ಶುಕ್ರವಾರ ಗ್ರಾಮ್​ಗೆ 105 ರೂನಷ್ಟು ಏರಿಕೆ ಕಂಡಿದೆ. ಮತ್ತೊಮ್ಮೆ ಇದರ ಬೆಲೆ 12,500 ರೂ ಸಮೀಪಕ್ಕೆ ಹೋಗಿದೆ. ಅಪರಂಜಿ ಚಿನ್ನದ ಬೆಲೆ 13,600 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಚಿನ್ನದ ಬೆಲೆಯಂತೆ ಬೆಳ್ಳಿ ಬೆಲೆಯೂ ಶುಕ್ರವಾರ ಏರಿದೆ. ಇಂದು ಇದರ ಬೆಲೆ ಗ್ರಾಮ್​ಗೆ 4 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,36,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,24,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,620 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,485 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,215 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 242 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,620 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,485 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 242 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,485 ರೂ
  • ಚೆನ್ನೈ: 12,580 ರೂ
  • ಮುಂಬೈ: 12,485 ರೂ
  • ದೆಹಲಿ: 12,500 ರೂ
  • ಕೋಲ್ಕತಾ: 12,485 ರೂ
  • ಕೇರಳ: 12,485 ರೂ
  • ಅಹ್ಮದಾಬಾದ್: 12,490 ರೂ
  • ಜೈಪುರ್: 12,500 ರೂ
  • ಲಕ್ನೋ: 12,500 ರೂ
  • ಭುವನೇಶ್ವರ್: 12,485 ರೂ

ಇದನ್ನೂ ಓದಿ: 21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 555 ರಿಂಗಿಟ್ (12,341 ರುಪಾಯಿ)
  • ದುಬೈ: 481.75 ಡಿರಾಮ್ (11,831 ರುಪಾಯಿ)
  • ಅಮೆರಿಕ: 134.50 ಡಾಲರ್ (12,132 ರುಪಾಯಿ)
  • ಸಿಂಗಾಪುರ: 174.20 ಸಿಂಗಾಪುರ್ ಡಾಲರ್ (12,215 ರುಪಾಯಿ)
  • ಕತಾರ್: 480 ಕತಾರಿ ರಿಯಾಲ್ (11,877 ರೂ)
  • ಸೌದಿ ಅರೇಬಿಯಾ: 489 ಸೌದಿ ರಿಯಾಲ್ (11,761 ರುಪಾಯಿ)
  • ಓಮನ್: 51.10 ಒಮಾನಿ ರಿಯಾಲ್ (11,973 ರುಪಾಯಿ)
  • ಕುವೇತ್: 39.24 ಕುವೇತಿ ದಿನಾರ್ (11,511 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 242 ರೂ
  • ಚೆನ್ನೈ: 260 ರೂ
  • ಮುಂಬೈ: 242 ರೂ
  • ದೆಹಲಿ: 242 ರೂ
  • ಕೋಲ್ಕತಾ: 242 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 242 ರೂ
  • ಜೈಪುರ್: 242 ರೂ
  • ಲಕ್ನೋ: 242 ರೂ
  • ಭುವನೇಶ್ವರ್: 260 ರೂ
  • ಪುಣೆ: 242

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us