Gold Rate Today Bangalore: ಚಿನ್ನದ ಬೆಲೆ ಇವತ್ತೂ ಇಳಿಕೆ; 8,755 ರೂಗೆ ಕುಸಿದ ಆಭರಣ ಚಿನ್ನದ ಬೆಲೆ

Bullion Market 2025 May 2nd: ಚಿನ್ನದ ಬೆಲೆ ಇಂದು ಶುಕ್ರವಾರವೂ ಇಳಿಕೆಗೊಂಡಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಹೊಂದಿದೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​​ಗೆ 20 ರೂ ತಗ್ಗಿದೆ. 10 ಗ್ರಾಮ್ ಚಿನ್ನದ ಬೆಲೆ 87,550 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈನಲ್ಲಿ ಗ್ರಾಮ್​​​ಗೆ 98 ರೂ ಇದೆ. ಚೆನ್ನೈ ಇತ್ಯಾದಿ ಕಡೆ 109 ರೂ ಬೆಲೆ ಇದೆ.

Gold Rate Today Bangalore: ಚಿನ್ನದ ಬೆಲೆ ಇವತ್ತೂ ಇಳಿಕೆ; 8,755 ರೂಗೆ ಕುಸಿದ ಆಭರಣ ಚಿನ್ನದ ಬೆಲೆ
ಚಿನ್ನ

Updated on: May 02, 2025 | 10:48 AM

ಬೆಂಗಳೂರು, ಮೇ 2: ಚಿನ್ನದ ಬೆಲೆ ಇಳಿಕೆ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ಈ ಹಳದಿ ಲೋಹದ ಬೆಲೆ (Gold rate today) ಸುಮಾರು 250 ರೂನಷ್ಟು ಕಡಿಮೆ ಆಗಿದೆ. ನಿನ್ನೆ ಭರ್ಜರಿ 200 ರೂ ಇಳಿಕೆಯಾಗಿದ್ದ ಇದರ ಬೆಲೆ ಇವತ್ತು ಶುಕ್ರವಾರ 20 ರೂ ಕಡಿಮೆಗೊಂಡಿದೆ. ಮೊನ್ನೆ 8,875 ರೂ ಇದ್ದ ಆಭರಣ ಚಿನ್ನದ ಬೆಲೆ ಇವತ್ತು 8,755 ರೂಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಗಣನೀಯವಾಗಿ ತಗ್ಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,550 ರೂ
  • ಚೆನ್ನೈ: 87,550 ರೂ
  • ಮುಂಬೈ: 87,550 ರೂ
  • ದೆಹಲಿ: 87,700 ರೂ
  • ಕೋಲ್ಕತಾ: 87,550 ರೂ
  • ಕೇರಳ: 87,550 ರೂ
  • ಅಹ್ಮದಾಬಾದ್: 87,600 ರೂ
  • ಜೈಪುರ್: 87,700 ರೂ
  • ಲಕ್ನೋ: 87,700 ರೂ
  • ಭುವನೇಶ್ವರ್: 87,550 ರೂ

ಇದನ್ನೂ ಓದಿ: ಲೈವ್ ಇವೆಂಟ್ಸ್​​ನಿಂದ ಆರ್ಥಿಕತೆಗೆ ಏನೆಲ್ಲಾ ಲಾಭ? ಮೇ 3ರಂದು ಕೇಂದ್ರ ಸಚಿವರಿಂದ ಶ್ವೇತಪತ್ರ ಬಿಡುಗಡೆ

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,450 ರಿಂಗಿಟ್ (86,950 ರುಪಾಯಿ)
  • ದುಬೈ: 3,590 ಡಿರಾಮ್ (82,040 ರುಪಾಯಿ)
  • ಅಮೆರಿಕ: 975 ಡಾಲರ್ (81,880 ರುಪಾಯಿ)
  • ಸಿಂಗಾಪುರ: 1,331 ಸಿಂಗಾಪುರ್ ಡಾಲರ್ (85,520 ರುಪಾಯಿ)
  • ಕತಾರ್: 3,625 ಕತಾರಿ ರಿಯಾಲ್ (83,510 ರೂ)
  • ಸೌದಿ ಅರೇಬಿಯಾ: 3,690 ಸೌದಿ ರಿಯಾಲ್ (82,610 ರುಪಾಯಿ)
  • ಓಮನ್: 381 ಒಮಾನಿ ರಿಯಾಲ್ (83,100 ರುಪಾಯಿ)
  • ಕುವೇತ್: 294.70 ಕುವೇತಿ ದಿನಾರ್ (80,620 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,800 ರೂ
  • ಚೆನ್ನೈ: 10,700 ರೂ
  • ಮುಂಬೈ: 9,800 ರೂ
  • ದೆಹಲಿ: 9,800 ರೂ
  • ಕೋಲ್ಕತಾ: 9,800 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,800 ರೂ
  • ಜೈಪುರ್: 9,800 ರೂ
  • ಲಕ್ನೋ: 9,800 ರೂ
  • ಭುವನೇಶ್ವರ್: 10,700 ರೂ
  • ಪುಣೆ: 9,800

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us