Gold Rate Today Bangalore: ನಿಲ್ಲುತ್ತಿಲ್ಲ ಚಿನ್ನದ ಬೆಲೆ ಏರಿಕೆ ನಾಗಾಲೋಟ; ಇಲ್ಲಿದೆ ದರಪಟ್ಟಿ

Bullion Market 2025 September 2nd: ಚಿನ್ನದ ಬೆಲೆ ಏರಿಕೆ ಮಂಗಳವಾರವೂ ಮುಂದುವರಿದಿದೆ. ಇಂದು ಹಳದಿ ಲೋಹದ ಬೆಲೆಯಲ್ಲಿ ಗ್ರಾಮ್​ಗೆ 20 ರೂ ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 9,705 ರೂನಿಂದ 9,725 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 10,609 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 126 ರೂನಷ್ಟಿದ್ದರೆ, ಚೆನ್ನೈ ಮೊದಲಾದೆಡೆ ಬೆಲೆ 136 ರೂ ಇದೆ.

Gold Rate Today Bangalore: ನಿಲ್ಲುತ್ತಿಲ್ಲ ಚಿನ್ನದ ಬೆಲೆ ಏರಿಕೆ ನಾಗಾಲೋಟ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Sep 02, 2025 | 10:21 AM

ಬೆಂಗಳೂರು, ಸೆಪ್ಟೆಂಬರ್ 2: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿಯುತ್ತಲೇ ಇದೆ. ನಿನ್ನೆ 85 ರೂ ಏರಿದ್ದ ಇದರ ಬೆಲೆ ಇವತ್ತು 20 ರೂ ಹೆಚ್ಚಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸ್ವರ್ಣ ದರ (gold rate) ಗ್ರಾಮ್​ಗೆ 250ಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,725 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,600 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 97,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,06,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 97,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,600 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,600 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,06,090 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,570 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,06,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 97,250 ರೂ
  • ಚೆನ್ನೈ: 97,250 ರೂ
  • ಮುಂಬೈ: 97,250 ರೂ
  • ದೆಹಲಿ: 97,400 ರೂ
  • ಕೋಲ್ಕತಾ: 97,250 ರೂ
  • ಕೇರಳ: 97,250 ರೂ
  • ಅಹ್ಮದಾಬಾದ್: 97,300 ರೂ
  • ಜೈಪುರ್: 97,400 ರೂ
  • ಲಕ್ನೋ: 97,400 ರೂ
  • ಭುವನೇಶ್ವರ್: 97,250 ರೂ

ಇದನ್ನೂ ಓದಿ: ಸತತ 8ನೇ ತಿಂಗಳು ಜಿಎಸ್​ಟಿ ಸಂಗ್ರಹ 1.80 ಲಕ್ಷ ಕೋಟಿ ರೂಗಿಂತಲೂ ಅಧಿಕ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,520 ರಿಂಗಿಟ್ (94,120 ರುಪಾಯಿ)
  • ದುಬೈ: 3,877.50 ಡಿರಾಮ್ (93,000 ರುಪಾಯಿ)
  • ಅಮೆರಿಕ: 1,080 ಡಾಲರ್ (95,140 ರುಪಾಯಿ)
  • ಸಿಂಗಾಪುರ: 1,394 ಸಿಂಗಾಪುರ್ ಡಾಲರ್ (95,520 ರುಪಾಯಿ)
  • ಕತಾರ್: 3,900 ಕತಾರಿ ರಿಯಾಲ್ (94,250 ರೂ)
  • ಸೌದಿ ಅರೇಬಿಯಾ: 3,950 ಸೌದಿ ರಿಯಾಲ್ (92,720 ರುಪಾಯಿ)
  • ಓಮನ್: 410 ಒಮಾನಿ ರಿಯಾಲ್ (93,810 ರುಪಾಯಿ)
  • ಕುವೇತ್: 315.40 ಕುವೇತಿ ದಿನಾರ್ (90,880 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,600 ರೂ
  • ಚೆನ್ನೈ: 13,600 ರೂ
  • ಮುಂಬೈ: 12,600 ರೂ
  • ದೆಹಲಿ: 12,600 ರೂ
  • ಕೋಲ್ಕತಾ: 12,600 ರೂ
  • ಕೇರಳ: 13,600 ರೂ
  • ಅಹ್ಮದಾಬಾದ್: 12,600 ರೂ
  • ಜೈಪುರ್: 12,600 ರೂ
  • ಲಕ್ನೋ: 12,600 ರೂ
  • ಭುವನೇಶ್ವರ್: 13,600 ರೂ
  • ಪುಣೆ: 12,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us