AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 755 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 January 30th: ಶುಕ್ರವಾರ ಚಿನ್ನ, ಬೆಳ್ಳಿ ಬೆಲೆಗಳು ತಗ್ಗಿವೆ. ಚಿನ್ನದ ಬೆಲೆ ಸುಮಾರು 800 ರೂಗಳಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆ 10-15 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 16,395 ರೂನಿಂದ 15,640 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 17,062 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 395 ರೂಗೆ ತಗ್ಗಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 415 ರೂ ಆಗಿದೆ.

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 755 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 30, 2026 | 10:51 AM

Share

ಬೆಂಗಳೂರು, ಜನವರಿ 30: ನಿನ್ನೆ ಸಿಕ್ಕಾಪಟ್ಟೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಇಳಿಕೆ ಕಂಡಿವೆ. ಆಭರಣ ಚಿನ್ನದ ಬೆಲೆ (Gold Rates) ಮತ್ತೆ 16,000 ರೂಗಿಂತ ಕಡಿಮೆಗೆ ಬಂದಿದೆ. ವಿದೇಶ ಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ 10-15 ರೂಗಳಷ್ಟು ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇದರ ಬೆಲೆ 400 ರು ಗಡಿಯೊಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,56,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,70,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 39,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,56,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 39,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 41,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 30ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 17,062 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,640 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,797 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 410 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 17,062 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,640 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 410 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,640 ರೂ
  • ಚೆನ್ನೈ: 16,200 ರೂ
  • ಮುಂಬೈ: 15,640 ರೂ
  • ದೆಹಲಿ: 15,655 ರೂ
  • ಕೋಲ್ಕತಾ: 15,640 ರೂ
  • ಕೇರಳ: 15,640 ರೂ
  • ಅಹ್ಮದಾಬಾದ್: 15,645 ರೂ
  • ಜೈಪುರ್: 15,655 ರೂ
  • ಲಕ್ನೋ: 15,655 ರೂ
  • ಭುವನೇಶ್ವರ್: 15,640 ರೂ

ಇದನ್ನೂ ಓದಿ: ಬರಲಿವೆ ನೋಟು ಬದಲಿಸಿ ಚಿಲ್ಲರೆ ಕೊಡುವ ಹೈಬ್ರಿಡ್ ಎಟಿಎಂಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 655 ರಿಂಗಿಟ್ (15,293 ರುಪಾಯಿ)
  • ದುಬೈ: 585.25 ಡಿರಾಮ್ (14,648 ರುಪಾಯಿ)
  • ಅಮೆರಿಕ: 164 ಡಾಲರ್ (15,077 ರುಪಾಯಿ)
  • ಸಿಂಗಾಪುರ: 206.30 ಸಿಂಗಾಪುರ್ ಡಾಲರ್ (14,974 ರುಪಾಯಿ)
  • ಕತಾರ್: 580.50 ಕತಾರಿ ರಿಯಾಲ್ (14,644 ರೂ)
  • ಸೌದಿ ಅರೇಬಿಯಾ: 605 ಸೌದಿ ರಿಯಾಲ್ (14,830 ರುಪಾಯಿ)
  • ಓಮನ್: 63.35 ಒಮಾನಿ ರಿಯಾಲ್ (15,128 ರುಪಾಯಿ)
  • ಕುವೇತ್: 49.74 ಕುವೇತಿ ದಿನಾರ್ (15,005 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 395 ರೂ
  • ಚೆನ್ನೈ: 415 ರೂ
  • ಮುಂಬೈ: 395 ರೂ
  • ದೆಹಲಿ: 395 ರೂ
  • ಕೋಲ್ಕತಾ: 395 ರೂ
  • ಕೇರಳ: 415 ರೂ
  • ಅಹ್ಮದಾಬಾದ್: 395 ರೂ
  • ಜೈಪುರ್: 395 ರೂ
  • ಲಕ್ನೋ: 395 ರೂ
  • ಭುವನೇಶ್ವರ್: 415 ರೂ
  • ಪುಣೆ: 395

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'