
ಬೆಂಗಳೂರು, ನವೆಂಬರ್ 30: ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಭರ್ಜರಿ ಹೆಚ್ಚಳ ಕಂಡಿವೆ. ಶುಕ್ರವಾರ 65 ರೂ ಹೆಚ್ಚಿದ್ದ ಸ್ವರ್ಣ ದರ (gold rate) ಇದೀಗ 125 ರೂ ಏರಿದೆ. ಆಭರಣ ಚಿನ್ನದ ಬೆಲೆ 11,900 ರೂ ಗಡಿ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 13,000 ರೂ ಗಡಿ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಗಣನೀಯವಾಗಿ ಹೆಚ್ಚಿದೆ. ಬೆಳ್ಳಿ ಬೆಲೆಯಂತೂ ವಾರಾಂತ್ಯದಲ್ಲಿ ಸಿಕ್ಕಾಪಟ್ಟೆ ಜಿಗಿದಿದೆ. ಒಂದೇ ದಿನದಲ್ಲಿ ಬರೋಬ್ಬರಿ 9 ರೂ ಹೆಚ್ಚಿದೆ. 176 ರೂ ಇದ್ದದ್ದು 185 ರೂಗೆ ಜಂಪ್ ಮಾಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,19,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,29,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 18,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,19,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 18,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 19,200 ರೂ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಅಚ್ಚರಿ ಹುಟ್ಟಿಸಿದ ಭಾರತದ ಆರ್ಥಿಕತೆ; 2ನೇ ಕ್ವಾರ್ಟರ್ನಲ್ಲಿ ಜಿಡಿಪಿ ಶೇ. 8.2 ಬೆಳವಣಿಗೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ