Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 March 31st: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಮಂಗಳವಾರ ಏರಿವೆ. ಚಿನ್ನದ ಬೆಲೆ ಗ್ರಾಮ್​ಗೆ 185 ರೂ ಏರಿದರೆ, ಬೆಳ್ಳಿ ಬೆಲೆ 5 ರೂ ದುಬಾರಿಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 13,500 ರೂನಿಂದ 13,685 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,929 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆಯೂ ಬೆಲೆ 250 ರೂ ಇದೆ.

Gold Rates: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Shutterstock

Updated on: Mar 31, 2026 | 12:25 PM

ಬೆಂಗಳೂರು, ಮಾರ್ಚ್ 31: ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ ಗ್ರಾಮ್​ಗೆ 185 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯೂ ಮಂಗಳವಾರ ಹೆಚ್ಚಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಮತ್ತೊಮ್ಮೆ 250 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,929 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,685 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,197 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,929 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,685 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,685 ರೂ
  • ಚೆನ್ನೈ: 13,670 ರೂ
  • ಮುಂಬೈ: 13,685 ರೂ
  • ದೆಹಲಿ: 13,700 ರೂ
  • ಕೋಲ್ಕತಾ: 13,685 ರೂ
  • ಕೇರಳ: 13,685 ರೂ
  • ಅಹ್ಮದಾಬಾದ್: 13,690 ರೂ
  • ಜೈಪುರ್: 13,700 ರೂ
  • ಲಕ್ನೋ: 13,700 ರೂ
  • ಭುವನೇಶ್ವರ್: 13,685 ರೂ

ಇದನ್ನೂ ಓದಿ: ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 574 ರಿಂಗಿಟ್ (13,370 ರುಪಾಯಿ)
  • ದುಬೈ: 505 ಡಿರಾಮ್ (12,911 ರುಪಾಯಿ)
  • ಅಮೆರಿಕ: 141.50 ಡಾಲರ್ (13,278 ರುಪಾಯಿ)
  • ಸಿಂಗಾಪುರ: 183.70 ಸಿಂಗಾಪುರ್ ಡಾಲರ್ (13,348 ರುಪಾಯಿ)
  • ಕತಾರ್: 504 ಕತಾರಿ ರಿಯಾಲ್ (12,991 ರೂ)
  • ಸೌದಿ ಅರೇಬಿಯಾ: 515 ಸೌದಿ ರಿಯಾಲ್ (12,882 ರುಪಾಯಿ)
  • ಓಮನ್: 54.05 ಒಮಾನಿ ರಿಯಾಲ್ (13,177 ರುಪಾಯಿ)
  • ಕುವೇತ್: 41.66 ಕುವೇತಿ ದಿನಾರ್ (12,744 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 250 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 250 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Tue, 31 March 26

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us