AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 October 3rd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ಇಳಿಕೆ ಕಂಡಿವೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 60 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 2 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 10,880 ರೂನಿಂದ 10,820 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 11,804 ರೂಗೆ ತಗ್ಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 153 ರೂನಿಂದ 151 ರೂಗೆ ಇಳಿದರೆ, ಚೆನ್ನೈ ಇತ್ಯಾದಿ ಕಡೆ 161 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 03, 2025 | 10:27 AM

Share

ಬೆಂಗಳೂರು, ಅಕ್ಟೋಬರ್ 3: ಸಿಕ್ಕಾಪಟ್ಟೆ ಏರುತ್ತಾ ಬಂದಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಅಪರೂಪಕ್ಕೆ ಇಳಿಕೆ ಕಂಡಿವೆ. ಅಪರಂಜಿ ಚಿನ್ನದ ಬೆಲೆ (gold rate) ಗ್ರಾಮ್​ಗೆ 65 ರೂನಷ್ಟು ಕಡಿಮೆ ಆಗಿದೆ. ನಿನ್ನೆ ಕೂಡ ಚಿನ್ನದ ಬೆಲೆ ಕಡಿಮೆ ಆಗಿತ್ತು. ಬೆಳ್ಳಿ ಬೆಲೆ ಎರಡು ರೂನಷ್ಟು ತಗ್ಗಿದೆ. ವಿದೇಶಗಳಲ್ಲೂ ಇಂದು ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಡಿಮೆಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,08,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,18,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,08,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 3ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,804 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,820 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 8,853 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,804 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,820 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 10,820 ರೂ
  • ಚೆನ್ನೈ: 10,820 ರೂ
  • ಮುಂಬೈ: 10,820 ರೂ
  • ದೆಹಲಿ: 10,835 ರೂ
  • ಕೋಲ್ಕತಾ: 10,820 ರೂ
  • ಕೇರಳ: 10,820 ರೂ
  • ಅಹ್ಮದಾಬಾದ್: 10,825 ರೂ
  • ಜೈಪುರ್: 10,835 ರೂ
  • ಲಕ್ನೋ: 10,835 ರೂ
  • ಭುವನೇಶ್ವರ್: 10,820 ರೂ

ಇದನ್ನೂ ಓದಿ: ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳು: ಅಕ್ಟೋಬರ್-ಡಿಸೆಂಬರ್ ಬಡ್ಡಿದರ ಪರಿಷ್ಕರಣೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 507 ರಿಂಗಿಟ್ (10,677 ರುಪಾಯಿ)
  • ದುಬೈ: 429 ಡಿರಾಮ್ (10,366 ರುಪಾಯಿ)
  • ಅಮೆರಿಕ: 119.50 ಡಾಲರ್ (10,606 ರುಪಾಯಿ)
  • ಸಿಂಗಾಪುರ: 153.60 ಸಿಂಗಾಪುರ್ ಡಾಲರ್ (10,572 ರುಪಾಯಿ)
  • ಕತಾರ್: 428.50 ಕತಾರಿ ರಿಯಾಲ್ (10,433 ರೂ)
  • ಸೌದಿ ಅರೇಬಿಯಾ: 437 ಸೌದಿ ರಿಯಾಲ್ (10,342 ರುಪಾಯಿ)
  • ಓಮನ್: 45.75 ಒಮಾನಿ ರಿಯಾಲ್ (10,547 ರುಪಾಯಿ)
  • ಕುವೇತ್: 34.94 ಕುವೇತಿ ದಿನಾರ್ (10,137 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 151 ರೂ
  • ಚೆನ್ನೈ: 161 ರೂ
  • ಮುಂಬೈ: 151 ರೂ
  • ದೆಹಲಿ: 151 ರೂ
  • ಕೋಲ್ಕತಾ: 151 ರೂ
  • ಕೇರಳ: 161 ರೂ
  • ಅಹ್ಮದಾಬಾದ್: 151 ರೂ
  • ಜೈಪುರ್: 151 ರೂ
  • ಲಕ್ನೋ: 151 ರೂ
  • ಭುವನೇಶ್ವರ್: 161 ರೂ
  • ಪುಣೆ: 151

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ