AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಹೊಸ ದಾಖಲೆ; ಇಲ್ಲಿದೆ ದರಪಟ್ಟಿ

Bullion Market 2025 September 3rd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಹೊಸ ದಾಖಲೆ ಬರೆದಿವೆ. ಇಂದು ಚಿನ್ನದ ಬೆಲೆ 80 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 1 ರೂ ಹಿಗ್ಗಿದೆ. ಆಭರಣ ಚಿನ್ನದ ಬೆಲೆ 9,805 ರೂಗೆ ಏರಿದರೆ, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 10,797 ರೂ ಮುಟ್ಟಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 126 ರೂನಿಂದ 127 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 137 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಹೊಸ ದಾಖಲೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 03, 2025 | 10:53 AM

Share

ಬೆಂಗಳೂರು, ಸೆಪ್ಟೆಂಬರ್ 3: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಹೊಸ ದಾಖಲೆ ಬರೆದಿವೆ. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 9,800 ರೂಗಳ ಮೈಲಿಗಲ್ಲು ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ (gold rate) 10,800 ರೂ ಮೈಲಿಗಲ್ಲಿಗೆ ಬಹಳ ಸಮೀಪ ಇದೆ. ದೆಹಲಿ ಮೊದಲಾದೆಡೆ ಆ ಬೆಲೆ ದಾಟಿ ಹೋಗಿದೆ. ಬೆಳ್ಳಿ ಬೆಲೆಯೂ ಭಾರತದಲ್ಲಿ 137 ರೂವರೆಗೂ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 98,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,07,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 98,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,700 ರೂ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,06,970 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,06,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 98,050 ರೂ
  • ಚೆನ್ನೈ: 98,050 ರೂ
  • ಮುಂಬೈ: 98,050 ರೂ
  • ದೆಹಲಿ: 98,200 ರೂ
  • ಕೋಲ್ಕತಾ: 98,050 ರೂ
  • ಕೇರಳ: 98,050 ರೂ
  • ಅಹ್ಮದಾಬಾದ್: 98,100 ರೂ
  • ಜೈಪುರ್: 98,200 ರೂ
  • ಲಕ್ನೋ: 98,200 ರೂ
  • ಭುವನೇಶ್ವರ್: 98,050 ರೂ

ಇದನ್ನೂ ಓದಿ: ವಿಶ್ವಕ್ಕೆ ಫ್ಯಾಕ್ಟರಿಯಾಗಲು ಭಾರತಕ್ಕೆ ಅಪೂರ್ವ ಅವಕಾಶ; ಆದರೆ, ಚೀನಾ ವಿಚಾರದಲ್ಲಿ ಈ ತಪ್ಪು ಬೇಡ ಎಂದ ಜಾನ್ಸನ್

ಇದನ್ನೂ ಓದಿ
Image
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,630 ರಿಂಗಿಟ್ (96,370 ರುಪಾಯಿ)
  • ದುಬೈ: 3,930 ಡಿರಾಮ್ (94,220 ರುಪಾಯಿ)
  • ಅಮೆರಿಕ: 1,090 ಡಾಲರ್ (95,980 ರುಪಾಯಿ)
  • ಸಿಂಗಾಪುರ: 1,417 ಸಿಂಗಾಪುರ್ ಡಾಲರ್ (96,970 ರುಪಾಯಿ)
  • ಕತಾರ್: 3,930 ಕತಾರಿ ರಿಯಾಲ್ (94,930 ರೂ)
  • ಸೌದಿ ಅರೇಬಿಯಾ: 4,000 ಸೌದಿ ರಿಯಾಲ್ (93,870 ರುಪಾಯಿ)
  • ಓಮನ್: 415.50 ಒಮಾನಿ ರಿಯಾಲ್ (95,030 ರುಪಾಯಿ)
  • ಕುವೇತ್: 320.20 ಕುವೇತಿ ದಿನಾರ್ (92,130 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,700 ರೂ
  • ಚೆನ್ನೈ: 13,700 ರೂ
  • ಮುಂಬೈ: 12,700 ರೂ
  • ದೆಹಲಿ: 12,700 ರೂ
  • ಕೋಲ್ಕತಾ: 12,700 ರೂ
  • ಕೇರಳ: 13,700 ರೂ
  • ಅಹ್ಮದಾಬಾದ್: 12,700 ರೂ
  • ಜೈಪುರ್: 12,700 ರೂ
  • ಲಕ್ನೋ: 12,700 ರೂ
  • ಭುವನೇಶ್ವರ್: 13,700 ರೂ
  • ಪುಣೆ: 12,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ