Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಲ್ಲಿದೆ ದರಪಟ್ಟಿ

Bullion Market 2026 February 5th: ನಿನ್ನೆ ಭರ್ಜರಿ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಇಂದು ಇಳಿದಿವೆ. ಚಿನ್ನದ ಬೆಲೆ 460 ರೂ, ಬೆಳ್ಳಿ ಬೆಲೆ 20 ರೂ ಕಡಿಮೆಗೊಂಡಿವೆ. ಆಭರಣ ಚಿನ್ನದ ಬೆಲೆ 14,650 ರೂನಿಂದ 14,155 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,442 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಹಾಗು ಇತರೆಡೆ 320 ರೂನಿಂದ 300 ರೂಗೆ ಇಳಿದಿದೆ.

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Feb 05, 2026 | 11:30 AM

ಬೆಂಗಳೂರು, ಫೆಬ್ರುವರಿ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಕುಸಿತದ ಹಾದಿಗೆ ಬಂದಿವೆ. ನಿನ್ನೆ ಬುಧವಾರ ಬರೋಬ್ಬರಿ 700ಕ್ಕೂ ಹೆಚ್ಚು ರೂಗಳಷ್ಟು ಹೆಚ್ಚಿದ್ದ ಚಿನ್ನದ ಬೆಲೆ (Gold Rates) ಇವತ್ತು 460 ರೂ ತಗ್ಗಿದೆ. ಬೆಳ್ಳಿ ಬೆಲೆಯೂ 20 ರೂ ಕಡಿಮೆ ಆಗಿದೆ. ಇದರ ಬೆಲೆ ನಿನ್ನೆ ಒಂದೇ ದಿನ ಬರೋಬ್ಬರಿ 40 ರೂಗಳಷ್ಟು ಹೆಚ್ಚಿತ್ತು. ಈಗ ಮತ್ತೆ ಇಳಿಕೆ ಕಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 30,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 30,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,442 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,155 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,582 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,442 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,155 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,155 ರೂ
  • ಚೆನ್ನೈ: 14,320 ರೂ
  • ಮುಂಬೈ: 14,155 ರೂ
  • ದೆಹಲಿ: 14,170 ರೂ
  • ಕೋಲ್ಕತಾ: 14,155 ರೂ
  • ಕೇರಳ: 14,155 ರೂ
  • ಅಹ್ಮದಾಬಾದ್: 14,160 ರೂ
  • ಜೈಪುರ್: 14,170 ರೂ
  • ಲಕ್ನೋ: 14,170 ರೂ
  • ಭುವನೇಶ್ವರ್: 14,155 ರೂ

ಇದನ್ನೂ ಓದಿ: ಕೆಲ ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ; ಇಗೋ ಇಲ್ಲಿವೆ ಕಾರಣಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 615 ರಿಂಗಿಟ್ (14,084 ರುಪಾಯಿ)
  • ದುಬೈ: 549.50 ಡಿರಾಮ್ (13,527 ರುಪಾಯಿ)
  • ಅಮೆರಿಕ: 153.50 ಡಾಲರ್ (13,878 ರುಪಾಯಿ)
  • ಸಿಂಗಾಪುರ: 195.40 ಸಿಂಗಾಪುರ್ ಡಾಲರ್ (13,866 ರುಪಾಯಿ)
  • ಕತಾರ್: 554 ಕತಾರಿ ರಿಯಾಲ್ (13,742 ರೂ)
  • ಸೌದಿ ಅರೇಬಿಯಾ: 555 ಸೌದಿ ರಿಯಾಲ್ (13,381 ರುಪಾಯಿ)
  • ಓಮನ್: 58.20 ಒಮಾನಿ ರಿಯಾಲ್ (13,669 ರುಪಾಯಿ)
  • ಕುವೇತ್: 44.78 ಕುವೇತಿ ದಿನಾರ್ (13,248 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 300 ರೂ
  • ಚೆನ್ನೈ: 300 ರೂ
  • ಮುಂಬೈ: 300 ರೂ
  • ದೆಹಲಿ: 300 ರೂ
  • ಕೋಲ್ಕತಾ: 300 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 300 ರೂ
  • ಜೈಪುರ್: 300 ರೂ
  • ಲಕ್ನೋ: 300 ರೂ
  • ಭುವನೇಶ್ವರ್: 300 ರೂ
  • ಪುಣೆ: 300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us