AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಮತ್ತೆ ಏರಿಕೆಗೆ ಬಂದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Bullion Market 2025 September 5th: ಚಿನ್ನದ ಬೆಲೆ ಇಂದು ಶುಕ್ರವಾರ ಏರಿಕೆಯಾದರೆ, ಬೆಳ್ಳಿ ಬೆಲೆಯಲ್ಲಿ ಒಂದು ರೂ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 9,795 ರೂನಿಂದ 9,865 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,762 ರೂಗೆ ಏರಿದೆ. ಬೆಂಗಳೂರು ಮುಂಬೈ ಮೊದಲಾದ ಕಡೆ ಬೆಳ್ಳಿ ಬೆಲೆ 127 ರೂನಿಂದ 126 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 136 ರೂಗೆ ಇಳಿದಿದೆ.

Gold Rate Today Bangalore: ಮತ್ತೆ ಏರಿಕೆಗೆ ಬಂದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 05, 2025 | 10:44 AM

Share

ಬೆಂಗಳೂರು, ಸೆಪ್ಟೆಂಬರ್ 5: ನಿನ್ನೆ ಅಪರೂಪಕ್ಕೆ ಇಳಿದಿದ್ದ ಚಿನ್ನದ ಬೆಲೆ (gold rate) ಇವತ್ತು ಮತ್ತೆ ಏರಿಕೆಯ ಹಾದಿಗೆ ಮರಳಿದೆ. ಗ್ರಾಮ್​ಗೆ ಬರೋಬ್ಬರಿ 70 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 9,800 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 10,700 ರೂ ಗಡಿ ದಾಟಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಒಂದು ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 98,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,07,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 12,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 98,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 12,600 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 13,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,07,620 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,720 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,07,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 98,650 ರೂ
  • ಚೆನ್ನೈ: 98,650 ರೂ
  • ಮುಂಬೈ: 98,650 ರೂ
  • ದೆಹಲಿ: 98,800 ರೂ
  • ಕೋಲ್ಕತಾ: 98,650 ರೂ
  • ಕೇರಳ: 98,650 ರೂ
  • ಅಹ್ಮದಾಬಾದ್: 98,700 ರೂ
  • ಜೈಪುರ್: 98,800 ರೂ
  • ಲಕ್ನೋ: 98,800 ರೂ
  • ಭುವನೇಶ್ವರ್: 98,650 ರೂ

ಇದನ್ನೂ ಓದಿ: ಹೊಸ ಜಿಎಸ್​ಟಿ ದರ: ಚಿನ್ನ ಮೇಲೇನು ಪರಿಣಾಮ? ಇಲ್ಲಿದೆ ಚಿನ್ನಕ್ಕಿರುವ ವಿವಿಧ ತೆರಿಗೆ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,640 ರಿಂಗಿಟ್ (96,900 ರುಪಾಯಿ)
  • ದುಬೈ: 3,950 ಡಿರಾಮ್ (94,880 ರುಪಾಯಿ)
  • ಅಮೆರಿಕ: 1,105 ಡಾಲರ್ (97,490 ರುಪಾಯಿ)
  • ಸಿಂಗಾಪುರ: 1,419 ಸಿಂಗಾಪುರ್ ಡಾಲರ್ (97,250 ರುಪಾಯಿ)
  • ಕತಾರ್: 3,975 ಕತಾರಿ ರಿಯಾಲ್ (96,220 ರೂ)
  • ಸೌದಿ ಅರೇಬಿಯಾ: 4,040 ಸೌದಿ ರಿಯಾಲ್ (94,990 ರುಪಾಯಿ)
  • ಓಮನ್: 419 ಒಮಾನಿ ರಿಯಾಲ್ (96,030 ರುಪಾಯಿ)
  • ಕುವೇತ್: 322.20 ಕುವೇತಿ ದಿನಾರ್ (92,960 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 12,600 ರೂ
  • ಚೆನ್ನೈ: 13,600 ರೂ
  • ಮುಂಬೈ: 12,600 ರೂ
  • ದೆಹಲಿ: 12,600 ರೂ
  • ಕೋಲ್ಕತಾ: 12,600 ರೂ
  • ಕೇರಳ: 13,600 ರೂ
  • ಅಹ್ಮದಾಬಾದ್: 12,600 ರೂ
  • ಜೈಪುರ್: 12,600 ರೂ
  • ಲಕ್ನೋ: 12,600 ರೂ
  • ಭುವನೇಶ್ವರ್: 13,600 ರೂ
  • ಪುಣೆ: 12,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ