Gold Rate Today: ಚಿನ್ನ, ಬೆಳ್ಳಿ ಇನ್ನಷ್ಟು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 6th: ಶುಕ್ರವಾರವೂ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 190 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ 25 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,155 ರೂನಿಂದ 13,965 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,235 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 300 ರೂನಿಂದ 275 ರೂಗೆ ಇಳಿದಿದೆ. ಚೆನ್ನೈ ಹಾಗೂ ಕೆಲವೆಡೆ ಬೆಲೆ 280ಕ್ಕೆ ಇಳಿದಿದೆ.

Gold Rate Today: ಚಿನ್ನ, ಬೆಳ್ಳಿ ಇನ್ನಷ್ಟು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Feb 06, 2026 | 11:07 AM

ಬೆಂಗಳೂರು, ಫೆಬ್ರುವರಿ 6: ಚಿನ್ನದ ಬೆಲೆ (Gold Rates) ಮತ್ತೂ ಕುಸಿದಿದೆ. ನಿನ್ನೆ 460 ರೂ ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು 190 ರೂ ಕಡಿಮೆಗೊಂಡಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಒಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಗೊಂಡಿದೆ. ಇನ್ನು, ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ ಮುಂದುವರಿಸಿದೆ. ಇವತ್ತು ಶುಕ್ರವಾರ ಇದರ ಬೆಲೆ 20-25 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 6ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,426 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,965 ರೂ
  • ಚೆನ್ನೈ: 14,120 ರೂ
  • ಮುಂಬೈ: 13,965 ರೂ
  • ದೆಹಲಿ: 13,980 ರೂ
  • ಕೋಲ್ಕತಾ: 13,965 ರೂ
  • ಕೇರಳ: 13,965 ರೂ
  • ಅಹ್ಮದಾಬಾದ್: 13,970 ರೂ
  • ಜೈಪುರ್: 13,980 ರೂ
  • ಲಕ್ನೋ: 13,980 ರೂ
  • ಭುವನೇಶ್ವರ್: 13,965 ರೂ

ಇದನ್ನೂ ಓದಿ: ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್​ಬಿಐ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 577 ರಿಂಗಿಟ್ (13,171 ರುಪಾಯಿ)
  • ದುಬೈ: 541.75 ಡಿರಾಮ್ (13,315 ರುಪಾಯಿ)
  • ಅಮೆರಿಕ: 150.50 ಡಾಲರ್ (13,585 ರುಪಾಯಿ)
  • ಸಿಂಗಾಪುರ: 191.50 ಸಿಂಗಾಪುರ್ ಡಾಲರ್ (13,572 ರುಪಾಯಿ)
  • ಕತಾರ್: 535.50 ಕತಾರಿ ರಿಯಾಲ್ (13,263 ರೂ)
  • ಸೌದಿ ಅರೇಬಿಯಾ: 551 ಸೌದಿ ರಿಯಾಲ್ (13,263 ರುಪಾಯಿ)
  • ಓಮನ್: 58.05 ಒಮಾನಿ ರಿಯಾಲ್ (13,613 ರುಪಾಯಿ)
  • ಕುವೇತ್: 44.44 ಕುವೇತಿ ದಿನಾರ್ (13,127 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 280 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 280 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ