Gold Rates: ಚಿನ್ನದ ಬೆಲೆ ಗ್ರಾಮ್​ಗೆ 195 ರೂ ಏರಿಕೆ; ಬೆಳ್ಳಿಯೂ ದುಬಾರಿ

Bullion Market 2026, May 6th: ಇಂದು ಬುಧವಾರ ಚಿನ್ನ, ಬೆಳ್ಳಿ ಬೆಲೆಗಳು ಹೆಚ್ಚಳಗೊಂಡಿವೆ. ಚಿನ್ನದ ಬೆಲೆ 195 ರೂ, ಬೆಳ್ಳಿ ಬೆಲೆ 10 ರೂ ಹೆಚ್ಚಿವೆ. ಆಭರಣ ಚಿನ್ನದ ಬೆಲೆ 13,675 ರೂನಿಂದ 13,870 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,131 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 265 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.

Gold Rates: ಚಿನ್ನದ ಬೆಲೆ ಗ್ರಾಮ್​ಗೆ 195 ರೂ ಏರಿಕೆ; ಬೆಳ್ಳಿಯೂ ದುಬಾರಿ
ಚಿನ್ನ
Image Credit source: Shutterstock

Updated on: May 06, 2026 | 11:16 AM

ಬೆಂಗಳೂರು, ಮೇ 6: ಸತತ ಕುಸಿತದ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 195 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ ಮತ್ತೆ 15,000 ರೂ ಗಡಿಗಿಂತ ಮೇಲೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬಂಗಾರದ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 6ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,131 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,870 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,348 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,131 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,870 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,870 ರೂ
  • ಚೆನ್ನೈ: 14,050 ರೂ
  • ಮುಂಬೈ: 13,870 ರೂ
  • ದೆಹಲಿ: 13,885 ರೂ
  • ಕೋಲ್ಕತಾ: 13,870 ರೂ
  • ಕೇರಳ: 13,870 ರೂ
  • ಅಹ್ಮದಾಬಾದ್: 13,875 ರೂ
  • ಜೈಪುರ್: 13,885 ರೂ
  • ಲಕ್ನೋ: 13,885 ರೂ
  • ಭುವನೇಶ್ವರ್: 13,870 ರೂ

ಇದನ್ನೂ ಓದಿ: ಚೀನಾವನ್ನು ಹಿಂದಿಕ್ಕಿದ ಭಾರತ; ಜಾಗತಿಕ ಹೂಡಿಕೆದಾರರ ಮೊದಲ ಆಯ್ಕೆ ‘ಇಂಡಿಯಾ’

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 562 ರಿಂಗಿಟ್ (13,510 ರುಪಾಯಿ)
  • ದುಬೈ: 511.25 ಡಿರಾಮ್ (13,234 ರುಪಾಯಿ)
  • ಅಮೆರಿಕ: 143 ಡಾಲರ್ (13,595 ರುಪಾಯಿ)
  • ಸಿಂಗಾಪುರ: 183.90 ಸಿಂಗಾಪುರ್ ಡಾಲರ್ (13,745 ರುಪಾಯಿ)
  • ಕತಾರ್: 509 ಕತಾರಿ ರಿಯಾಲ್ (13,277 ರೂ)
  • ಸೌದಿ ಅರೇಬಿಯಾ: 520 ಸೌದಿ ರಿಯಾಲ್ (13,176 ರುಪಾಯಿ)
  • ಓಮನ್: 54.15 ಒಮಾನಿ ರಿಯಾಲ್ (13,371 ರುಪಾಯಿ)
  • ಕುವೇತ್: 42.03 ಕುವೇತಿ ದಿನಾರ್ (13,046 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 265 ರೂ
  • ಚೆನ್ನೈ: 270 ರೂ
  • ಮುಂಬೈ: 265 ರೂ
  • ದೆಹಲಿ: 265 ರೂ
  • ಕೋಲ್ಕತಾ: 265 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 265 ರೂ
  • ಜೈಪುರ್: 265 ರೂ
  • ಲಕ್ನೋ: 265 ರೂ
  • ಭುವನೇಶ್ವರ್: 270 ರೂ
  • ಪುಣೆ: 265

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:15 am, Wed, 6 May 26

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us