Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ ಎರಡು ದಿನದಲ್ಲಿ 3,000 ರೂ ಏರಿಕೆ

Bullion Market 2026, May 7th: ಚಿನ್ನ, ಬೆಳ್ಳಿ ಬೆಲೆಗಳು ಸತತ ಎರಡನೇ ದಿನ ಹೆಚ್ಚಳವಾಗಿವೆ. ಚಿನ್ನದ ಬೆಲೆ 105 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 5 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 13,870 ರೂನಿಂದ 13,975 ರೂ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,246 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 270 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 275 ರೂ ಇದೆ.

Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ ಎರಡು ದಿನದಲ್ಲಿ 3,000 ರೂ ಏರಿಕೆ
ಚಿನ್ನ
Image Credit source: Shutterstock

Updated on: May 07, 2026 | 11:28 AM

ಬೆಂಗಳೂರು, ಮೇ 7: ಚಿನ್ನದ ಬೆಲೆ (Gold Rates) ಇವತ್ತೂ ಏರಿಕೆಯಾಗಿದೆ. ನಿನ್ನೆ 195 ರೂನಷ್ಟು ಹೆಚ್ಚಿದ್ದ ಬಂಗಾರದ ದರ ಇವತ್ತು ಗುರುವಾರ 105 ರೂ ಜಿಗಿದಿದೆ. ಎರಡು ದಿನದಲ್ಲಿ ಇದರ ಬೆಲೆಯಲ್ಲಿ ಗ್ರಾಮ್​ಗೆ 300 ರೂನಷ್ಟು ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಸ್ವರ್ಣ ಬೆಲೆ ಹೆಚ್ಚಿದೆ. ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ ಹೆಚ್ಚಳ ಕಂಡಿದೆ. ನಿನ್ನೆ ಗ್ರಾಮ್​ಗೆ 10 ರೂ ಹೆಚ್ಚಿದ್ದ ಅದು ಇವತ್ತು 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 7ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,975 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,434 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,975 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,975 ರೂ
  • ಚೆನ್ನೈ: 14,101 ರೂ
  • ಮುಂಬೈ: 13,975 ರೂ
  • ದೆಹಲಿ: 13,990 ರೂ
  • ಕೋಲ್ಕತಾ: 13,975 ರೂ
  • ಕೇರಳ: 13,975 ರೂ
  • ಅಹ್ಮದಾಬಾದ್: 13,980 ರೂ
  • ಜೈಪುರ್: 13,990 ರೂ
  • ಲಕ್ನೋ: 13,990 ರೂ
  • ಭುವನೇಶ್ವರ್: 13,975 ರೂ

ಇದನ್ನೂ ಓದಿ: ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯ ಜಯಭೇರಿ: ದೇಶದ ಜಿಡಿಪಿ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೂಡೀಸ್ ಮತ್ತು ಎಡಿಬಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 566 ರಿಂಗಿಟ್ (13,710 ರುಪಾಯಿ)
  • ದುಬೈ: 524.50 ಡಿರಾಮ್ (13,548 ರುಪಾಯಿ)
  • ಅಮೆರಿಕ: 146.50 ಡಾಲರ್ (13,898 ರುಪಾಯಿ)
  • ಸಿಂಗಾಪುರ: 185.70 ಸಿಂಗಾಪುರ್ ಡಾಲರ್ (13,899 ರುಪಾಯಿ)
  • ಕತಾರ್: 522.50 ಕತಾರಿ ರಿಯಾಲ್ (13,600 ರೂ)
  • ಸೌದಿ ಅರೇಬಿಯಾ: 534 ಸೌದಿ ರಿಯಾಲ್ (13,505 ರುಪಾಯಿ)
  • ಓಮನ್: 55.40 ಒಮಾನಿ ರಿಯಾಲ್ (13,654 ರುಪಾಯಿ)
  • ಕುವೇತ್: 43.17 ಕುವೇತಿ ದಿನಾರ್ (13,373 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 270 ರೂ
  • ಚೆನ್ನೈ: 275 ರೂ
  • ಮುಂಬೈ: 270 ರೂ
  • ದೆಹಲಿ: 270 ರೂ
  • ಕೋಲ್ಕತಾ: 270 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 270 ರೂ
  • ಜೈಪುರ್: 270 ರೂ
  • ಲಕ್ನೋ: 270 ರೂ
  • ಭುವನೇಶ್ವರ್: 275 ರೂ
  • ಪುಣೆ: 270

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us