Gold Rate Today Bangalore: ಚಿನ್ನದ ಬೆಲೆಯಲ್ಲಿ 70 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2025 August 8th: ಚಿನ್ನದ ಬೆಲೆ ಇವತ್ತು ಶುಕ್ರವಾರ ಗ್ರಾಮ್​ಗೆ 70 ರೂ ಏರಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಇದೆ. 22 ಕ್ಯಾರಟ್ ಚಿನ್ನದ ಬೆಲೆ 9,470 ರೂಗೆ ಏರಿದರೆ, 24 ಕ್ಯಾರಟ್ ಚಿನ್ನದ ಬೆಲೆ 10,331 ರೂಗೆ ಹೆಚ್ಚಿದೆ. ಬೆಳ್ಳಿ ಬೆಲೆ ಬೆಂಗಳೂರು ಇತ್ಯಾದಿ ಕಡೆ 117 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದ ಕಡೆ ಬೆಲೆ 127 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆಯಲ್ಲಿ 70 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Aug 08, 2025 | 11:42 AM

ಬೆಂಗಳೂರು, ಆಗಸ್ಟ್ 8: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಇಂದು ಶುಕ್ರವಾರ ಹಳದಿ ಲೋಹದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಾಗಿದೆ. ಆಭರಣ ಚಿನ್ನದ ಬೆಲೆ (gold rate) 9,500 ರೂ ಸಮೀಪಕ್ಕೆ ದೌಡಾಯಿಸುತ್ತಿದೆ. ಅಪರಂಜಿ ಚಿನ್ನದ ಬೆಲೆ 10,300 ರೂ ಗಡಿ ದಾಟಿ ಮುಂದೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 7,750 ರೂ ಗಡಿಗೆ ಬಂದಿದೆ. ವಿದೇಶಗಳಲ್ಲೂ ಇವತ್ತು ಬೆಲೆ ಹೆಚ್ಚಳ ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಶುಕ್ರವಾರ ಏರಿಕೆ ಕಂಡು ಬಂದಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 94,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,03,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 94,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 94,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,03,310 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 94,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,03,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 94,700 ರೂ
  • ಚೆನ್ನೈ: 94,700 ರೂ
  • ಮುಂಬೈ: 94,700 ರೂ
  • ದೆಹಲಿ: 94,850 ರೂ
  • ಕೋಲ್ಕತಾ: 94,700 ರೂ
  • ಕೇರಳ: 94,700 ರೂ
  • ಅಹ್ಮದಾಬಾದ್: 94,750 ರೂ
  • ಜೈಪುರ್: 94,850 ರೂ
  • ಲಕ್ನೋ: 94,850 ರೂ
  • ಭುವನೇಶ್ವರ್: 94,700 ರೂ

ಇದನ್ನೂ ಓದಿ: ಪಿಎಂ ಕಿಸಾನ್ ಸಂಪದ ಯೋಜನೆ: ಸರ್ಕಾರದಿಂದ ಹೆಚ್ಚುವರಿ 1,920 ಕೋಟಿ ರೂ ಪುಷ್ಟಿ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,430 ರಿಂಗಿಟ್ (91,640 ರುಪಾಯಿ)
  • ದುಬೈ: 3,777.50 ಡಿರಾಮ್ (90,110 ರುಪಾಯಿ)
  • ಅಮೆರಿಕ: 1,055 ಡಾಲರ್ (92,440 ರುಪಾಯಿ)
  • ಸಿಂಗಾಪುರ: 1,351 ಸಿಂಗಾಪುರ್ ಡಾಲರ್ (92,230 ರುಪಾಯಿ)
  • ಕತಾರ್: 3,800 ಕತಾರಿ ರಿಯಾಲ್ (91,350 ರೂ)
  • ಸೌದಿ ಅರೇಬಿಯಾ: 3,860 ಸೌದಿ ರಿಯಾಲ್ (90,120 ರುಪಾಯಿ)
  • ಓಮನ್: 399.50 ಒಮಾನಿ ರಿಯಾಲ್ (90,980 ರುಪಾಯಿ)
  • ಕುವೇತ್: 307.60 ಕುವೇತಿ ದಿನಾರ್ (88,220 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,700 ರೂ
  • ಚೆನ್ನೈ: 12,700 ರೂ
  • ಮುಂಬೈ: 11,700 ರೂ
  • ದೆಹಲಿ: 11,700 ರೂ
  • ಕೋಲ್ಕತಾ: 11,700 ರೂ
  • ಕೇರಳ: 12,700 ರೂ
  • ಅಹ್ಮದಾಬಾದ್: 11,700 ರೂ
  • ಜೈಪುರ್: 11,700 ರೂ
  • ಲಕ್ನೋ: 11,700 ರೂ
  • ಭುವನೇಶ್ವರ್: 12,700 ರೂ
  • ಪುಣೆ: 11,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us