AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 January 8th: ಚಿನ್ನ, ಬೆಳ್ಳಿ ಬೆಲೆಗಳು ಗುರುವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ 130 ರೂ, ಬೆಳ್ಳಿ ಬೆಲೆ 9 ರೂ ತಗ್ಗಿವೆ. ಆಭರಣ ಚಿನ್ನದ ಬೆಲೆ 12,785 ರೂನಿಂದ 12,650 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,948 ರೂನಿಂದ 13,800 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 263 ರೂನಿಂದ 252 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 272 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 08, 2026 | 10:43 AM

Share

ಬೆಂಗಳೂರು, ಜನವರಿ 8: ಸತತ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ 130 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ 9 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ (Gold rates) ಗ್ರಾಮ್​ಗೆ 13,800 ರೂಗೆ ಇಳಿಕೆಯಾಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಗಳು ತಗ್ಗಿವೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಇಳಿದಿದೆ. ಗ್ರಾಮ್​ಗೆ 9 ರೂನಷ್ಟು ಬೆಳ್ಳಿ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,26,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,38,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,26,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,200 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,800 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,650 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,350 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 252 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,800 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,650 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 252 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,650 ರೂ
  • ಚೆನ್ನೈ: 12,750 ರೂ
  • ಮುಂಬೈ: 12,650 ರೂ
  • ದೆಹಲಿ: 12,665 ರೂ
  • ಕೋಲ್ಕತಾ: 12,650 ರೂ
  • ಕೇರಳ: 12,650 ರೂ
  • ಅಹ್ಮದಾಬಾದ್: 12,655 ರೂ
  • ಜೈಪುರ್: 12,665 ರೂ
  • ಲಕ್ನೋ: 12,665 ರೂ
  • ಭುವನೇಶ್ವರ್: 12,650 ರೂ

ಇದನ್ನೂ ಓದಿ: ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 569 ರಿಂಗಿಟ್ (12,585 ರುಪಾಯಿ)
  • ದುಬೈ: 496.50 ಡಿರಾಮ್ (12,146 ರುಪಾಯಿ)
  • ಅಮೆರಿಕ: 138.50 ಡಾಲರ್ (12,445 ರುಪಾಯಿ)
  • ಸಿಂಗಾಪುರ: 177.50 ಸಿಂಗಾಪುರ್ ಡಾಲರ್ (12,425 ರುಪಾಯಿ)
  • ಕತಾರ್: 494 ಕತಾರಿ ರಿಯಾಲ್ (12,177 ರೂ)
  • ಸೌದಿ ಅರೇಬಿಯಾ: 503 ಸೌದಿ ರಿಯಾಲ್ (12,052 ರುಪಾಯಿ)
  • ಓಮನ್: 52.60 ಒಮಾನಿ ರಿಯಾಲ್ (12,276 ರುಪಾಯಿ)
  • ಕುವೇತ್: 40.50 ಕುವೇತಿ ದಿನಾರ್ (11,912 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 252 ರೂ
  • ಚೆನ್ನೈ: 272 ರೂ
  • ಮುಂಬೈ: 252 ರೂ
  • ದೆಹಲಿ: 252 ರೂ
  • ಕೋಲ್ಕತಾ: 252 ರೂ
  • ಕೇರಳ: 272 ರೂ
  • ಅಹ್ಮದಾಬಾದ್: 252 ರೂ
  • ಜೈಪುರ್: 252 ರೂ
  • ಲಕ್ನೋ: 252 ರೂ
  • ಭುವನೇಶ್ವರ್: 272 ರೂ
  • ಪುಣೆ: 252

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?