Gold Rates: ನಿನ್ನೆ ಏರಿದ್ದ ಚಿನ್ನದ ಬೆಲೆ ಇವತ್ತು ಕುಸಿತ; ಬೆಳ್ಳಿಯೂ ಅಗ್ಗ

Bullion Market 2026 April 9th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಗುರುವಾರ ಇಳಿಕೆಯಾಗಿವೆ. ಚಿನ್ನದ ಬೆಲೆ 215 ರೂ, ಬೆಳ್ಳಿ ಬೆಲೆ 5 ರೂ ತಗ್ಗಿವೆ. 22 ಕ್ಯಾರಟ್ ಚಿನ್ನದ ಬೆಲೆ 14,100 ರೂನಿಂದ 13,885 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,148 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rates: ನಿನ್ನೆ ಏರಿದ್ದ ಚಿನ್ನದ ಬೆಲೆ ಇವತ್ತು ಕುಸಿತ; ಬೆಳ್ಳಿಯೂ ಅಗ್ಗ
ಚಿನ್ನ
Image Credit source: Shutterstock

Updated on: Apr 09, 2026 | 10:52 AM

ಬೆಂಗಳೂರು, ಏಪ್ರಿಲ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಣ್ಣಾಮುಚ್ಚಾಳೆ ಆಟ ಆಡುತ್ತಿವೆ. ಅದರಲ್ಲೂ ಚಿನ್ನದ ಬೆಲೆಯಂತೂ ಪ್ರಕ್ಷುಬ್ಧತೆಯಿಂದ ಕೂಡಿದೆ. ನಿನ್ನ ಬಹುತೇಕ 500 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು 200ಕ್ಕೂ ಹೆಚ್ಚು ರೂಗಳಷ್ಟು ಕುಸಿತ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿಯೊಳಗೆ ಇಳಿದಿದೆ. ಬೆಳ್ಳಿ ಬೆಲೆಯೂ ಇಂದು ಗುರುವಾರ ಕಡಿಮೆಗೊಂಡಿದೆ. ನಿನ್ನೆ 10 ರೂ ಇಳಿದಿದ್ದ ಇದರ ಬೆಲೆ ಇವತ್ತು 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 9ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,148 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,885 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,361 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,148 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,885 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,885 ರೂ
  • ಚೆನ್ನೈ: 14,000 ರೂ
  • ಮುಂಬೈ: 13,885 ರೂ
  • ದೆಹಲಿ: 13,900 ರೂ
  • ಕೋಲ್ಕತಾ: 13,885 ರೂ
  • ಕೇರಳ: 13,885 ರೂ
  • ಅಹ್ಮದಾಬಾದ್: 13,890 ರೂ
  • ಜೈಪುರ್: 13,900 ರೂ
  • ಲಕ್ನೋ: 13,900 ರೂ
  • ಭುವನೇಶ್ವರ್: 13,885 ರೂ

ಇದನ್ನೂ ಓದಿ: ಪಿಪಿಎಫ್​ನಲ್ಲಿ ಕೇವಲ 1 ಪರ್ಸಂಟ್ ಬಡ್ಡಿಗೆ ಸಾಲ? ಯಾವ ವರ್ಷ, ಎಷ್ಟು ಅವಧಿ ಇತ್ಯಾದಿ ನಿಯಮಗಳು ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 579 ರಿಂಗಿಟ್ (13,471 ರುಪಾಯಿ)
  • ದುಬೈ: 530.50 ಡಿರಾಮ್ (13,375 ರುಪಾಯಿ)
  • ಅಮೆರಿಕ: 148 ಡಾಲರ್ (13,696 ರುಪಾಯಿ)
  • ಸಿಂಗಾಪುರ: 187.80 ಸಿಂಗಾಪುರ್ ಡಾಲರ್ (13,636 ರುಪಾಯಿ)
  • ಕತಾರ್: 526 ಕತಾರಿ ರಿಯಾಲ್ (13,360 ರೂ)
  • ಸೌದಿ ಅರೇಬಿಯಾ: 540 ಸೌದಿ ರಿಯಾಲ್ (13,324 ರುಪಾಯಿ)
  • ಓಮನ್: 56.65 ಒಮಾನಿ ರಿಯಾಲ್ (13,625 ರುಪಾಯಿ)
  • ಕುವೇತ್: 43.50 ಕುವೇತಿ ದಿನಾರ್ (13,141 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us