AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 9th: ವಾರಾಂತ್ಯದಲ್ಲಿ 390 ರೂ ಏರಿದ್ದ ಚಿನ್ನದ ಬೆಲೆ ಇವತ್ತು 205 ರೂ ಹೆಚ್ಚಿದೆ. ಎರಡು ದಿನದಲ್ಲಿ ಇದರ ಬೆಲೆ ಬಹುತೇಕ 600 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,355 ರೂನಿಂದ 14,560 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,884 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 285 ರೂನಿಂದ 300 ರೂಗೆ ಏರಿದೆ.

Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 09, 2026 | 12:17 PM

Share

ಬೆಂಗಳೂರು, ಫೆಬ್ರುವರಿ 9: ಕಳೆದ ವಾರಾಂತ್ಯದಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Rates) ಇಂದು ಸೋಮವಾರವೂ ಮತ್ತಷ್ಟು ದುಬಾರಿಗೊಂಡಿದೆ. ಗ್ರಾಮ್​ಗೆ 205 ರೂಗಳಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿ ಸಮೀಪ ಹೋಗುತ್ತಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಜಿಗಿತವೂ ಮುಂದುವರಿದಿದೆ. ಸೋಮವಾರ ಇದರ ಒಂದು ಗ್ರಾಮ್ ಬೆಲೆ 15 ರೂ ಏರಿಕೆ ಆಗಿ 300 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,58,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 30,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 30,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 9ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,884 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,560 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,913 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,884 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,560 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,560 ರೂ
  • ಚೆನ್ನೈ: 14,650 ರೂ
  • ಮುಂಬೈ: 14,560 ರೂ
  • ದೆಹಲಿ: 14,575 ರೂ
  • ಕೋಲ್ಕತಾ: 14,560 ರೂ
  • ಕೇರಳ: 14,560 ರೂ
  • ಅಹ್ಮದಾಬಾದ್: 14,565 ರೂ
  • ಜೈಪುರ್: 14,575 ರೂ
  • ಲಕ್ನೋ: 14,575 ರೂ
  • ಭುವನೇಶ್ವರ್: 14,560 ರೂ

ಇದನ್ನೂ ಓದಿ: ಸರ್ವಮ್ ಎಐನಿಂದ ಹೊಸ ಮಾಡಲ್; ಡಾಕ್ಯುಮೆಂಟ್ ಇಂಟೆಲಿಜೆನ್ಸ್​ನಲ್ಲಿ ವಿಶ್ವಲ್ಲೇ ಬೆಸ್ಟ್; ಕಟು ಟೀಕಾಕಾರರಿಗೂ ಅಚ್ಚರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 599 ರಿಂಗಿಟ್ (13,981 ರುಪಾಯಿ)
  • ದುಬೈ: 562.50 ಡಿರಾಮ್ (14,128 ರುಪಾಯಿ)
  • ಅಮೆರಿಕ: 153.50 ಡಾಲರ್ (13,735 ರುಪಾಯಿ)
  • ಸಿಂಗಾಪುರ: 192.10 ಸಿಂಗಾಪುರ್ ಡಾಲರ್ (14,057 ರುಪಾಯಿ)
  • ಕತಾರ್: 550 ಕತಾರಿ ರಿಯಾಲ್ (13,712 ರೂ)
  • ಸೌದಿ ಅರೇಬಿಯಾ: 559 ಸೌದಿ ರಿಯಾಲ್ (13,449 ರುಪಾಯಿ)
  • ಓಮನ್: 58.60 ಒಮಾನಿ ರಿಯಾಲ್ (13,691 ರುಪಾಯಿ)
  • ಕುವೇತ್: 45.21 ಕುವೇತಿ ದಿನಾರ್ (13,391 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 300 ರೂ
  • ಚೆನ್ನೈ: 300 ರೂ
  • ಮುಂಬೈ: 300 ರೂ
  • ದೆಹಲಿ: 300 ರೂ
  • ಕೋಲ್ಕತಾ: 300 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 300 ರೂ
  • ಜೈಪುರ್: 300 ರೂ
  • ಲಕ್ನೋ: 300 ರೂ
  • ಭುವನೇಶ್ವರ್: 300 ರೂ
  • ಪುಣೆ: 300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ