Gold Rate Today Bangalore: ಚಿನ್ನದ ಬೆಲೆ ಇವತ್ತು ಭರ್ಜರಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 May 9th: ಈ ವಾರ ನಿರಂತರವಾಗಿ ಏರಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ ತಗ್ಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿದಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಗ್ರಾಮ್​​​​ಗೆ 55 ರೂ ಕಡಿಮೆಗೊಂಡಿದೆ. 9,130 ರೂ ಇದ್ದ ಬೆಲೆ 9,015 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,960 ರೂನಿಂದ 9,835 ರೂಗೆ ತಗ್ಗಿದೆ. ಬೆಳ್ಳಿ ಬೆಲೆ 99 ರೂ ಮತ್ತು 111 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ ಇವತ್ತು ಭರ್ಜರಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: May 09, 2025 | 10:32 AM

ಬೆಂಗಳೂರು, ಮೇ 9: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಸಂಘರ್ಷ ಏರ್ಪಟ್ಟ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ (Gold rate today) ಕುಸಿತವಾಗಿದೆ. ಯುದ್ಧದ ಪರಿಣಾಮಕ್ಕಿಂತ ಜಾಗತಿಕ ಮಾರುಕಟ್ಟೆಯ ಸಹಜ ವರ್ತನೆಯು ಬೆಲೆ ಇಳಿಕೆಗೆ ಕಾರಣವಾಗಿದೆ. ಇಂದು ಶುಕ್ರವಾರ ಆಭರಣ ಚಿನ್ನದ ಬೆಲೆ 115 ರೂ ಇಳಿದಿದೆ. ನಿನ್ನೆ ಮತ್ತು ಮೊನ್ನೆ ಚಿನ್ನದ ಬೆಲೆ ಬಹುತೇಕ 300 ರೂನಷ್ಟು ಜಂಪ್ ಆಗಿತ್ತು. ಈಗ ತುಸು ತಗ್ಗಿದೆ. ಭಾರತದಲ್ಲಿ ಮಾತ್ರವಲ್ಲ, ಬೇರೆ ದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,150 ರೂ
  • ಚೆನ್ನೈ: 90,150 ರೂ
  • ಮುಂಬೈ: 90,150 ರೂ
  • ದೆಹಲಿ: 90,300 ರೂ
  • ಕೋಲ್ಕತಾ: 90,150 ರೂ
  • ಕೇರಳ: 90,150 ರೂ
  • ಅಹ್ಮದಾಬಾದ್: 90,200 ರೂ
  • ಜೈಪುರ್: 90,300 ರೂ
  • ಲಕ್ನೋ: 90,300 ರೂ
  • ಭುವನೇಶ್ವರ್: 90,150 ರೂ

ಇದನ್ನೂ ಓದಿ: ಮೇ 9, ಪಾಕಿಸ್ತಾನಕ್ಕೆ ಪೀಕಲಾಟ; 1,10,55,26,78,340 ರೂ ಐಎಂಎಫ್ ಸಾಲಕ್ಕೆ ಅಡ್ಡಗಾಲು ಹಾಕಲಿದೆ ಭಾರತ

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,520 ರಿಂಗಿಟ್ (89,780 ರುಪಾಯಿ)
  • ದುಬೈ: 3,710 ಡಿರಾಮ್ (86,560 ರುಪಾಯಿ)
  • ಅಮೆರಿಕ: 1,015 ಡಾಲರ್ (87,050 ರುಪಾಯಿ)
  • ಸಿಂಗಾಪುರ: 1,368 ಸಿಂಗಾಪುರ್ ಡಾಲರ್ (90,270 ರುಪಾಯಿ)
  • ಕತಾರ್: 3,770 ಕತಾರಿ ರಿಯಾಲ್ (88,700 ರೂ)
  • ಸೌದಿ ಅರೇಬಿಯಾ: 3,770 ಸೌದಿ ರಿಯಾಲ್ (86,390 ರುಪಾಯಿ)
  • ಓಮನ್: 391.50 ಒಮಾನಿ ರಿಯಾಲ್ (87,210 ರುಪಾಯಿ)
  • ಕುವೇತ್: 302.90 ಕುವೇತಿ ದಿನಾರ್ (84,670 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,900 ರೂ
  • ಚೆನ್ನೈ: 11,100 ರೂ
  • ಮುಂಬೈ: 9,900 ರೂ
  • ದೆಹಲಿ: 9,900 ರೂ
  • ಕೋಲ್ಕತಾ: 9,900 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 9,900 ರೂ
  • ಜೈಪುರ್: 9,900 ರೂ
  • ಲಕ್ನೋ: 9,900 ರೂ
  • ಭುವನೇಶ್ವರ್: 11,100 ರೂ
  • ಪುಣೆ: 9,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us