Gold Prices: ಶಾಂತಗೊಳ್ಳುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆ; ದೇಶ ವಿದೇಶಗಳಲ್ಲಿ ಇವತ್ತಿನ ಚಿನ್ನದ ದರ ಎಷ್ಟಿದೆ?

|

Updated on: Apr 11, 2023 | 5:00 AM

Bullion Market 2023, April 11th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,400 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,430 ರುಪಾಯಿ ಆಗಿದೆ. ಬೆಳ್ಳಿ ಬೆಲೆ ಕೂಡ ತುಸು ಇಳಿಕೆ ಕಂಡಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Prices: ಶಾಂತಗೊಳ್ಳುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆ; ದೇಶ ವಿದೇಶಗಳಲ್ಲಿ ಇವತ್ತಿನ ಚಿನ್ನದ ದರ ಎಷ್ಟಿದೆ?
ಚಿನ್ನ
Follow us on

ಬೆಂಗಳೂರು: ಚಿನ್ನದ ಸತತ ಏರಿಕೆಯ ಮಧ್ಯೆ ಆಗಾಗ ಬೆಲೆ ಇಳಿಕೆಯೂ ನಡೆಯುತ್ತಿರುತ್ತದೆ. ಇಂಥ ಅಪರೂಪದ ದಿನಗಳಲ್ಲಿ ಇಂದೂ ಒಂದು. ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (Gold and Silver Prices) ಕಡಿಮೆ ಆಗುವ ಮೂಲಕ ಭಾರತದ ಆಭರಣ ಪ್ರಿಯರ ಉತ್ಸಾಹ ಹೆಚ್ಚಿಸಿದೆ. ಬೆಳ್ಳಿ ಬೆಲೆ 100 ಗ್ರಾಮ್​ಗೆ 30 ರುಪಾಯಿಯಷ್ಟು ಅಲ್ಪ ಇಳಿಕೆ ಕಂಡಿದೆ. ಇನ್ನು, ಭಾರತದಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 390 ರುಪಾಯಿಯಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ಈಗ ಇಳಿದರೂ ಮುಂದಿನ ದಿನಗಳಲ್ಲಿ ಇದೇ ಇಳಿಕೆಯ ಹಾದಿ ಇರುತ್ತದೆಂದು ನಿರೀಕ್ಷಿಸಲಾಗದು. ಇತ್ತೀಚಿನ ಕೆಲ ವಾರಗಳ ಹಿಂದೆ ನಾಲ್ಕು ಸಾವಿರದಷ್ಟು ಏರಿಕೆ ಕಂಡಿದ್ದ ಚಿನ್ನದ ಬೆಲೆಗೆ ಬೇಡಿಕೆ ಯಾವತ್ತಿದ್ದರೂ ಇರುವಂಥದ್ದೇ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,400 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,430 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,630 ರುಪಾಯಿಗೆ ಇಳಿದಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 8,000 ರುಪಾಯಿಗೆ ಇಳಿಕೆ ಕಂಡಿದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.

ವಿದೇಶಗಳ ಚಿನಿವಾರಪೇಟೆಗಳಲ್ಲಿಯೂ (Bullion Market) ಚಿನ್ನದ ಬೆಲೆ ಇಳಿಕೆ ಕಂಡಿದೆ. ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳು, ಅಮೆರಿಕ, ಸಿಂಗಾಪುರ, ಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಕನಿಷ್ಠ 50 ಸಾವಿರ ರೂ ಮಟ್ಟಕ್ಕೆ ಸಮೀಪ ಇವೆ. ಮಲೇಷ್ಯಾ, ಕತಾರ್ ಮತ್ತು ಓಮನ್​ನಲ್ಲಿ ಚಿನ್ನದ ಬೆಲೆ 52 ಸಾವಿರ ರೂಗಿಂತ ಹೆಚ್ಚಿದೆ.

ಚಿನ್ನ, ಬೆಳ್ಳಿ ಬೆಲೆ ಇಳಿಕೆಗೆ ಏನು ಕಾರಣ?

ಅಮೆರಿಕದಲ್ಲಿ ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಅಲ್ಲಿಯ ಫೆಡರಲ್ ಬ್ಯಾಂಕು ತನ್ನ ಬಡ್ಡಿ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇರುವುದರಿಂದ ಜನರು ಚಿನ್ನದ ಮೇಲಿನ ಹೂಡಿಕೆಯನ್ನು ಕಡಿಮೆ ಮಾಡಿದ್ದಾರೆ. ಹೀಗಾಗಿ, ಚಿನ್ನದ ಬೆಲೆ ಸದ್ಯಕ್ಕೆ ಜಾಗತಿಕವಾಗಿ ಇಳಿಕೆ ಕಾಣುತ್ತಿದೆ. ಆದರೂ ಕೂಡ ಅಮೆರಿಕದ ಆರ್ಥಿಕತೆಯ ತುಮುಲ, ಹಣದುಬ್ಬರ ಅನಿಶ್ಚಿತತೆ, ಬಡ್ಡಿ ದರ ಬಗ್ಗೆ ಅಸ್ಪಷ್ಟತೆ, ಡಾಲರ್ ದುರ್ಬಲಗೊಂಡಿರುವುದು ಇವೆಲ್ಲವೂ ಹೂಡಿಕೆದಾರರನ್ನು ಮುಂದಿನ ದಿನಗಳಲ್ಲಾದರೂ ಚಿನ್ನದತ್ತ ಗಮನ ಹರಿಸುವಂತೆ ಮಾಡಬಹುದು.

ಇದನ್ನೂ ಓದಿKarthik Sharma: ಒಂದು ಷೇರಿನ ಕಥೆ; 23,000 ಕೋಟಿ ರೂ ಒಡೆಯನಾದ ಕಾರ್ತಿಕ್ ಶರ್ಮಾ

ಭಾರತದಲ್ಲಿರುವ ಬೆಲೆ (ಏಪ್ರಿಲ್ 11ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,430 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 763 ರೂ

ಬೆಂಗಳೂರಿನಲ್ಲಿರುವ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,480 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,450 ರೂ
  • ಚೆನ್ನೈ: 56,000 ರೂ
  • ಮುಂಬೈ: 55,400 ರೂ
  • ದೆಹಲಿ: 55,550 ರೂ
  • ಕೋಲ್ಕತಾ: 55,400 ರೂ
  • ಕೇರಳ: 56,250 ರೂ
  • ಅಹ್ಮದಾಬಾದ್: 55,400 ರೂ
  • ಜೈಪುರ್: 55,550 ರೂ
  • ಲಕ್ನೋ: 55,550 ರೂ
  • ಭುವನೇಶ್ವರ್: 55,400 ರೂ

ಇದನ್ನೂ ಓದಿPM Kisan: ಪಿಎಂ ಕಿಸಾನ್ 14ನೇ ಕಂತು ಯಾವಾಗ? ಹೊಸ ರೈತರು ನೊಂದಾಯಿಸುವುದು ಹೇಗೆ? ಎಲ್ಲಾ ವಿವರ ಇಲ್ಲಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (52,615 ರುಪಾಯಿ)
  • ದುಬೈ: 2242.50 ಡಿರಾಮ್ (50,070 ರುಪಾಯಿ)
  • ಅಮೆರಿಕ: 620 ಡಾಲರ್ (50,832 ರುಪಾಯಿ)
  • ಸಿಂಗಾಪುರ: 827 ಸಿಂಗಾಪುರ್ ಡಾಲರ್ (50,890 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (51,806 ರೂ)
  • ಓಮನ್: 243 ಒಮಾನಿ ರಿಯಾಲ್ (51,696 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,725 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,000 ರೂ
  • ಚೆನ್ನೈ: 8,000 ರೂ
  • ಮುಂಬೈ: 7,630 ರೂ
  • ದೆಹಲಿ: 7,630 ರೂ
  • ಕೋಲ್ಕತಾ: 7,630 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,630 ರೂ
  • ಜೈಪುರ್: 7,630 ರೂ
  • ಲಕ್ನೋ: 7,630 ರೂ
  • ಭುವನೇಶ್ವರ್: 8,000 ರೂ

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ