ಬೆಂಗಳೂರು, ಏಪ್ರಿಲ್ 11: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಕೂಡ ಇಂದು ಗುರುವಾರ ಭರ್ಜರಿ ಏರಿಕೆ ಕಂಡಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ 400 ರೂನಷ್ಟು ಹೆಚ್ಚಾಗಿದೆ. ಅದೂ ಒಂದು ಗ್ರಾಮ್ ಚಿನ್ನಕ್ಕೆ. ಇನ್ನು, ಬೆಳ್ಳಿ ಬೆಲೆ ಇಂದು ಗ್ರಾಮ್ಗೆ ಒಂದು ರೂ ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಸುಮಾರು 7 ರೂನಷ್ಟು ಹೆಚ್ಚಾಗಿದೆ. ಈ ಏರಿಕೆ ಹಂತ ಎಲ್ಲಿಯವರೆಗೆ ಎಂಬುದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಸದ್ಯದಲ್ಲೇ ಅಮೆರಿಕದ ಆರ್ಥಿಕ ಪರಿಸ್ಥಿತಿಯ ವರದಿ ಬರಲಿದ್ದು, ಅದಾದ ಬಳಿಕ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಅನಿಲ್ ಅಂಬಾನಿಗೆ ಹಿನ್ನಡೆ; ಡೆಲ್ಲಿ ಮೆಟ್ರೋಗೆ 8,000 ಕೋಟಿ ರೂ ಮರಳಿಸುವಂತೆ ರಿಲಾಯನ್ಸ್ ಇನ್ಫ್ರಾಗೆ ಸುಪ್ರೀಂಕೋರ್ಟ್ ನಿರ್ದೇಶನ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ