ಬೆಂಗಳೂರು: ಚಿನ್ನ ಮತ್ತು ಬೆಳ್ಳಿಗಳ ಏರಿಳಿಕೆಯ ಆಟ ಮುಂದುವರಿದಿದೆ. ನಿನ್ನೆ ನೂರು ಗ್ರಾಮ್ಗೆ ಐದು ಸಾವಿರ ರೂನಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಇದೀಗ ಭಾರತೀಯ ಚಿನಿವಾರಪೇಟೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. ಆದರೆ, ಇವತ್ತಿನ ಮಾರುಕಟ್ಟೆ ಟ್ರೆಂಡ್ ಪ್ರಕಾರ ಇಂದು ಚಿನ್ನದ ಬೆಲೆ ಮತ್ತೆ ಏರಬಹುದು. ಭಾರತದಲ್ಲಿ 10 ಗ್ರಾಮ್ ಚಿನ್ನದ ಬೆಲೆ 100 ರುಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆ 10 ಗ್ರಾಮ್ಗೆ 8 ರೂನಷ್ಟು ಹೆಚ್ಚಳಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಆಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,780 ರುಪಾಯಿಗೆ ಏರಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,180 ರುಪಾಯಿಗೆ ಏರಿಕೆ ಕಂಡಿದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ತುಟ್ಟಿಯಾಗುತ್ತಾ ಹೋಗಬಹುದು.
ಇದನ್ನೂ ಓದಿ: Hardwyn India: 3 ವರ್ಷದಲ್ಲಿ 43ಪಟ್ಟು ಹೆಚ್ಚು ಲಾಭ; ಹಾರ್ಡ್ವಿನ್ ಷೇರಿಗೆ ಹಣ ಹಾಕಿದವರು ಇವತ್ತು ಕೋಟ್ಯಾಧೀಶ್ವರರು
ಬೆಂಗಳೂರಿನಲ್ಲಿರುವ ಬೆಲೆ
ಇದನ್ನೂ ಓದಿ: Price Rise: ಸರ್ಕಾರಕ್ಕೆ ಹಾಲು ಸಕ್ಕರೆ ತಲೆನೋವು; ಹಣದುಬ್ಬರಕ್ಕೆ ಕಾರಣವಾಗುವ ಪ್ರಮುಖ ಆಹಾರವಸ್ತುಗಳು ಯಾವುವು?